ಮೌನ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು

ಕರ್ನಾಟಕ ಅಷ್ಟೇ ಏಕೆ ಈ ರಾಷ್ಟ್ರ ಕಂಡ ಮಹಾನ್ ಮುತ್ಸದಿ ರಾಜಕಾರಣಿಗಳಲ್ಲಿ ಡಿ. ದೇವರಾಜ ಅರಸ್ ಅವರು ಅಗ್ರ ಗಣ್ಯರು.  1969 ರಿಂದ 1979 ದಶಕದಲ್ಲಿ “ಅರಸು ಯುಗ” ವೆಂದು ಹೇಳುವುದು ವಾಡಿಕೆಯಾಗಿದೆ.  ಈ ರಾಜ್ಯದ ಮುಖ್ಯಮಂತ್ರಿಯಾಗಿ ಅತೀ ದೀರ್ಘಕಾಲ ಆಡಳಿತ ನಡೆಸಿ, ಸಮಾಜದ ಹಿಂದುಳಿದ ವರ್ಗದವರು, ದಲಿತರು ಮತ್ತು ಬಡಜನರನ್ನು ಜಾಗೃತಗೊಳಿಸಿ, ಅವರ ಕನಸು ಮನಸಿನಲ್ಲೂ ನೆನಸಲಾಗದಿದ್ದ ಅಧಿಕಾರದ ಅರಮನೆಗೆ ಕರೆದುಕೊಂಡು ಹೋದ ಮುತ್ಸದ್ದಿ.  ಹೀಗಾಗಿ ಅವರು ಈ ರಾಜ್ಯದ, ಈ ದೇಶದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿರುತ್ತಾರೆ.  ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಅವರನ್ನು “ ಮೌನಕ್ರಾಂತಿಯ ಹರಿಕಾರ” ಎಂದು ಹೇಳುತ್ತಾರೆ. ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಡಿ. ದೇವರಾಜ ಅರಸು ಕರ್ನಾಟಕದಲ್ಲಿ ಆರ್ಥಿಕ, ಸಾಮಾಜಿಕ ಆಂದೋಲನದ ಮೂಲಕ ಹಲವಾರು ಹಲವಾರು ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸುವುದರಲ್ಲಿ ಯಶಸ್ಸು…

Read More