ಕೊರೋನ ವೈರಸ್ : ದೇಶದಲ್ಲಿ ಒಟ್ಟು 198 ಮಂದಿ ಮೃತ್ಯು

ಹೊಸದಿಲ್ಲಿ: ದೇಶದಲ್ಲಿ ಕೊರೋನ ಸೋಂಕು ಮತ್ತೆ 26 ಮಂದಿಯ ಜೀವ ಬಲಿ ಪಡೆದಿದ್ದು, ಇಡೀ ವಿಶ್ವವನ್ನು ಬೆಚ್ಚಿ ಬೀಳಿಸಿರುವ ಸಾಂಕ್ರಾಮಿಕದಿಂದ ದೇಶದಲ್ಲಿ ಸಾವಿಗೀಡಾಗಿರುವವರ ಸಂಖ್ಯೆ 200ರ ಗಡಿ ಸಮೀಪಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 16 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ದೇಶದಲ್ಲಿ ಒಟ್ಟು 198 ಮಂದಿ ಜೀವ ಕಳೆದುಕೊಂಡಂತಾಗಿದೆ.

ಮಧ್ಯಪ್ರದೇಶದಲ್ಲಿ ಏಳು, ಉತ್ತರ ಪ್ರದೇಶ, ಪಂಜಾಬ್ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನ ಸೋಂಕಿಗೆ ಬಲಿಯಾದವರ ಸಂಖ್ಯೆ 80ಕ್ಕೇರಿದ್ದು, ಪುಣೆಯಲ್ಲಿ ಒಂದೇ ದಿನ 10 ಮಂದಿ ಮೃತಪಟ್ಟಿದ್ದಾರೆ. ಒಂದು ತಿಂಗಳ ಹಿಂದೆ ಮಹಾರಾಷ್ಟ್ರದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿತ್ತು.

ದೇಶದಲ್ಲಿ ಬುಧವಾರ 582 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸತತ ಏಳನೇ ದಿನ 500ಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರವೊಂದರಲ್ಲೇ 117 ಪ್ರಕರಣಗಳು ವರದಿಯಾಗಿವೆ. ಮಧ್ಯಪ್ರದೇಶದಲ್ಲಿ 64 ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಈಗಾಗಲೇ 30 ಮಂದಿಯನ್ನು ಈ ಸೋಂಕು ಬಲಿಪಡೆದಿದೆ.

ದೆಹಲಿಯಲ್ಲಿ 93 ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 669ಕ್ಕೇರಿದೆ.

Please follow and like us:
error