Breaking News
Home / ಅಂಕಣಗಳು / ಸಾದತ್ ಹಸನ್ ಮಂಟೋ ಕಥೆಗಳು- ಛೇ ಮಿಸ್ಟೇಕ್
ಸಾದತ್ ಹಸನ್ ಮಂಟೋ ಕಥೆಗಳು- ಛೇ ಮಿಸ್ಟೇಕ್

ಸಾದತ್ ಹಸನ್ ಮಂಟೋ ಕಥೆಗಳು- ಛೇ ಮಿಸ್ಟೇಕ್

sadat-hasan-manto-stories-kannadanet

  1. ಛೇ ಮಿಸ್ಟೇಕ್ 

ಹೊಟ್ಟೆಗೆ ಇರಿದ ಚೂರಿ ನೀಟಾಗಿ ಕೆಳಗಡೆ ಎಳೆದಾಗ

ನೇರವಾಗಿ ಪೈಜಾಮ ಕಟ್ಟಿದ ನಾಡಾಕ್ಕೆ ತಗಲಿ ಪೈಜಾಮ ಒಳಚಡ್ಡಿ ಕಳಚಿ ಕೆಳಗೆ ಬಿತ್ತು…

ಇರಿಯುತ್ತಿದ್ದವ ಅದನ್ನು ಕಂಡು ಚೀರಿ ಹೇಳಿದ” ಛೇ ಮಿಸ್ಟೇಕಾಯ್ತಲ್ಲ !””

 

2.  ವಿಶ್ರಾಂತಿ ಬೇಕಾಗಿದೆ

‘ನೋಡು ಅವನಿನ್ನೂ ಸತ್ತಿಲ್ಲ! ಇನ್ನೂ ಉಸಿರಾಡುತ್ತಿದ್ದಾನೆ!’

‘ಇರಲಿ ಬಿಡು ಗೆಳೆಯಾ, ನನಗೂ ವಿಶ್ರಾಂತಿ ಬೇಕಾಗಿದೆ’.

 

3. ಸರಿಯಾದ ಕ್ರಮ

ಮೊಹಲ್ಲಾ ಒಂದರ ಮೇಲೆ ದಾಳಿನಡೆಯಿತು ಹಾಗೂ ಕೆಲ ಅಲ್ಪಸಂಖ್ಯಾತರನ್ನು ಚಾಕುವಿನಿಂದ ತಿವಿದು ಸಾಯಿಸಲಾಯಿತು. ಇತರರು ಜೀವಭಯದಿಂದ ಅಲ್ಲಿಂದ ಓಡಿಹೋದರು. ಇದನ್ನೆಲ್ಲಾ ಕಂಡ ದಂಪತಿಗಳಿಬ್ಬರು ತಮ್ಮ ಮನೆಯ ನೆಲಮಾಳಿಗೆಯಲ್ಲಿ ಅವಿತುಕೊಂಡರು.

ಅವರಿಬ್ಬರೂ ಎರಡು ಹಗಲು ಮತ್ತು ಎರಡು ರಾತ್ರಿ ಕೊಲೆಗಡುಕರ ಹೆದರಿಕೆಯಿಂದ ಅಲ್ಲೇ ಅವಿತುಕೊಂಡಿದ್ದರು. ಆದರೆ ಯಾರೂ ಬರಲಿಲ್ಲ.

ಮತ್ತೆರಡು ದಿನಗಳು ಕಳೆದವು. ಅವರಲ್ಲಿನ ಹೆದರಿಕೆ ಕಡಿಮೆಯಾಯಿತು. ಆದರೆ ಹಸಿವು, ನೀರಡಿಕೆ ತೀವ್ರವಾಗಿ ಕಾಡತೊಡಗಿದವು.

ಇನ್ನೂ ನಾಲ್ಕು ದಿನಗಳು ಕಳೆದವು. ಈಗ ಅವರನ್ನು ಸಾವಿನ ಹೆದರಿಕೆ ಕಾಡುತ್ತಿರಲಿಲ್ಲ. ಅವರಿಗೆ ಬದುಕು ಅರ್ಥಹೀನ ಎನ್ನಿಸತೊಡಗಿತ್ತು. ಅವಿತುಕೊಂಡಿದ್ದ ನೆಲಮಾಳಿಗೆಯಿಂದ ಹೊರಬಂದರು.

ಮೊಹಲ್ಲಾದ ಜನರಿಗೆ ತಮ್ಮನ್ನು ಒಪ್ಪಿಸಿಕೊಂಡ ಗಂಡ, ಕ್ಷೀಣ ದನಿಯಲ್ಲಿ ಹೇಳಿದ, ‘ನಮ್ಮನ್ನು ನಿಮಗೊಪ್ಪಿಸಿಕೊಳ್ಳುತ್ತಿದ್ದೇವೆ. ದಯವಿಟ್ಟು ನಮ್ಮನ್ನು ಕೊಂದುಬಿಡಿ’.

ಈ ಮಾತುಗಳು ಆ ಮೊಹಲ್ಲಾದ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿತು. ಅವರು ಜೈನರಾಗಿದ್ದರು. ‘ನಮ್ಮ ಧರ್ಮದಲ್ಲಿ ಕೊಲ್ಲುವುದು ಅಪರಾಧ’ ಎಂದರು.

ಅವರೆಲ್ಲಾ ಸೇರಿ ಆ ಗಂಡ ಹೆಂಡಿರನ್ನು ಹಿಡಿದು ಮತ್ತೊಂದು ಮೊಹಲ್ಲಾದ ಜನರಿಗೆ ಸೂಕ್ತವಾಗಿ ವಿಲೇವಾರಿ ಮಾಡಲು ಒಪ್ಪಿಸಿದರು

About admin

Leave a Reply

Scroll To Top