ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಂದ ಅಂಬ್ಯುಲೆನ್ಸ್ಗೆ ಚಾಲನೆ


Kannadanet NEWS ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ.ಪಾಟೀಲ್ ರೇವೂರ ಅವರು ಕೊಪ್ಪಳ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ವಿಶೇಷ ಅಂಬ್ಯುಲೆನ್ಸ್ ಗೆ ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿಯ ಅನುದಾನದ ಅಡಿಯಲ್ಲಿ ನೀಡಲಾದ ಕೊಪ್ಪಳ ಕಿಮ್ಸ್ ಟೀಚಿಂಗ್ ಆಸ್ಪತ್ರೆಯ ವಿಶೇಷ ಅಂಬ್ಯುಲೆನ್ಸ್ಗೆ ಕೆ.ಕೆ.ಅರ್.ಡಿ.ಬಿ ಅಧ್ಯಕ್ಷರು ಚಾಲನೆ ನೀಡಿ, ವಾಹನವನ್ನು ಪರಿಶೀಲಿಸಿದರು. ಅಂಬ್ಯುಲೆನ್ಸ್ ವೆಂಟಿಲೇಟರ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಹಾಗೂ ಕೆ.ರಾಘವೇಂದ್ರ ಹಿಟ್ನಾಳ್, ಜಿ.ಪಂ. ಸದಸ್ಯ ಗವಿಸಿದ್ದಪ್ಪ ಕರಡಿ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕಾಧಿಕಾರಿ ರಘುನಂದನ್ ಮೂರ್ತಿ, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು, ಕಿಮ್ಸ್ ನಿರ್ದೇಶಕ ಡಾ. ವೈಜನಾಥ ಇಟಗಿ ಇದ್ದರು.

Please follow and like us:
error