ಕೋವಿಡ್ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ : ವಿಕಾಸ್ ಕಿಶೋರ್ ಸುರಳ್ಕರ್


Kannadanet : ಕೋವಿಡ್ ನಿರ್ಮೂಲನೆಗೆ ಜಿಲ್ಲೆಯ ಎಲ್ಲಾ ಜನರು ಸಹಕಾರ ನೀಡಬೇಕು ಮತ್ತು ಯಾರು ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಸೋರ್ ಸುರಳ್ಕರ್ ಅವರು ಹೇಳಿದರು.
ಅವರು ಇಂದು (ಮೇ 31) ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯ ಲಾಕ್-ಡೌನ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದರು.
ಸೋಮವಾರದಿಂದ ಗುರುವಾರದ ವರೆಗೆ ವಾರದಲ್ಲಿ ನಾಲ್ಕು ದಿನ ಬೆಳಿಗ್ಗೆ 8 ರಿಂದ 12 ಗಂಟೆಗಳ ವರೆಗೆ ಬ್ಯಾಂಕುಗಳು ತೆರೆದಿರಲಿವೆ. ಮತ್ತು ಕೃಷಿ ಚಟುವಟಿಕೆಗಳಿಗಾಗಿ ಬೀಜ ಮತ್ತು ಗೊಬ್ಬರ ಹಾಗೂ ಇತರೆ ಕೃಷಿ ಸಂಬAಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದAತೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಗಳವರೆಗೆ ಅನುಮತಿಸಲಾಗಿದೆ. ಮತ್ತು ಯಾವುದೇ ಕಿರಾಣಿ ಅಂಗಡಿ ಮತ್ತು ತರಕಾರಿ ಅಂಗಡಿಗಳು ತೆರೆದಿರುವುದಿಲ್ಲ ಆದರೆ ಹೋಮ ಡೆಲಿವರಿಗೆ ಅನುಮತಿಸಲಾಗಿದೆ. ಜನರು ತಮ್ಮ ಯಾವುದೇ ಸಮಸ್ಯೆಗಳಿದ್ದರೆ ಜಿಲ್ಲಾ ಸಹಾಯವಾಣಿ ಸಂಖ್ಯೆ 08539- 225001 ಗೆ ಕರೆ ಮಾಡಬಹುದಾಗಿದೆ ಎಂದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್-19 ಕೆಲಸ ಕಾರ್ಯಗಳಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು ಅವರಿಗು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತರಬೇಕು ಎಂದು ಹೇಳಿದ ಜಿಲ್ಲಾಧಿಕಾರಿಗಳು ಜನರು ತಮ್ಮ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.

Please follow and like us:
error