ಕೋವಿಡ್ ನಿರ್ವಹಣೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಂದ ಜೂಮ್ ಆ್ಯಪ್ ಮೂಲಕ ಸಭೆ


Kannadanet NEWs ಕೋವಿಡ್-19ರ ನಿರ್ವಹಣೆಗೆ ಸಂಭAಧಿಸಿದAತೆ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇಂದು (ಮೇ 31) ಜೂಮ್ ಆ್ಯಪ್ ಮೂಲಕ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.
ಜಿಲ್ಲೆಯ ಸ್ಥಿತಿ-ಗತಿ ಬಗ್ಗೆ ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ಚಿಕಿತ್ಸೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು, ಕೋವಿಡ್ ಮೂರನೇ ಅಲೆ ಹರಡುತ್ತಿರುವ ಹಿನ್ನೆಲೆ ಇದು ಮಕ್ಕಳಿಗೂ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಿದ್ದು, ಶಿಕ್ಷಕರು ಮನೆ-ಮನೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕೋವಿಡ್ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಈ ಕೂಡಲೇ ಅವರಿಗೆ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಲಾಕ್‌ಡೌನ್ ಪರಿಣಾಮಕಾರಿಯಾಗುತ್ತಿಲ್ಲ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಮತ್ತು ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಡಿಎಪಿ ಗೊಬ್ಬರದ ಕೊರತೆಯಾಗಿದ್ದು, ರೈತರಿಂದ ನಮಗೆ ಹಲವಾರು ಕರೆಗಳು ಬರುತ್ತಿವೆ. ಹಾಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆದಷ್ಟು ಬೇಗನೆ ರೈತರಿಗೆ ಗೊಬ್ಬರ ಒದಗಿಸಬೇಕು ಎಂದು ಹೇಳಿದಾಗ ಸಚಿವರು ಜೂಮ್ ಸಭೆಯಲ್ಲಿಯೇ ಸಂಬAಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಕೊಪ್ಪಳ ಜಿಲ್ಲೆಯಲ್ಲಿ ಗೊಬ್ಬರದ ಸಮಸ್ಯೆ ಶ್ರೀಘ್ರ ಬಗೆಹರಿಸುವುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ 984 ಜನ ಕೋವಿಡ್ ಕೇರ್‌ನಲ್ಲಿದ್ದು, 922 ಜನರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ. 1100 ಜನರನ್ನು ಕೋವಿಡ್ ಕೇರ್ ಸೆಂಟರ್‌ನಿAದ ಡಿಸ್‌ಚಾರ್ಜ್ ಮಾಡಲಾಗಿದೆ. ಅಲ್ಲದೇ ಫ್ರಂಟ್‌ಲೈನ್ ವಕರ‍್ಸ್ಗೆ ವ್ಯಾಕ್ಸಿನೇಷನ್ ಜಿಲ್ಲೆಯಲ್ಲಿ ನೀಡಲಾಗುತ್ತಿದೆ. ಬ್ಲಾö್ಯಕ್ ಫಂಗಸ್ 07 ಕೇಸ್‌ಗಳಲ್ಲಿ 02 ಸಾವುಗಳಾಗಿವೆ ಹಾಗೂ 05 ಕೇಸ್‌ಗಳು ಸಕ್ರೀಯವಾಗಿದ್ದು, ಈ ಕುರಿತು ಮುಂಜಾಗೃತೆ ವಹಿಸಲಾಗುತ್ತಿದೆ ಎಂದು ಸಚಿವರಿಗೆ ತಿಳಿಸಿದಾಗ, ಸಚಿವರು ಜಿಲ್ಲೆಯಲ್ಲಿ ಇನ್ನೂ ಹೆಚ್ಚು ವ್ಯಾಕ್ಸಿನೇಷನ್ ಜನರಿಗೆ ಪಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಗಂಗಾವತಿ ತಹಶೀಲ್ದಾರ ಅವರೊಂದಿಗೆ ಸಚಿವರು ಮಾತನಾಡಿ, ಗಂಗಾವತಿ ತಾಲ್ಲೂಕಿನಲ್ಲಿಯ ಕೋವಿಡ್ ಸ್ಥಿತಿ-ಗತಿ ಕುರಿತು ವಿಚಾರಿಸಿದಾಗ ತಹಶೀಲ್ದಾರ ಎಂ.ನಾಗರಾಜ್ ಅವರು ಪಿ.ಹೆಚ್.ಸಿ & ಸಿ.ಹೆಚ್.ಸಿ ಗಳಲ್ಲಿಯೂ ಹೆಚ್ಚಿನ ಮಟ್ಟದಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದ್ದು, ತಾಲ್ಲೂಕಿನಲ್ಲಿ ಕೋವಿಡ್ ನೋಡಲ್ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಸಚಿವರು ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೆ ಕೋವಿಡ್ ಟೆಸ್ಟಿಂಗ್ ಕಡಿಮೆಯಾಗಬಾರದು. ಈ ನಿಟ್ಟಿನಲ್ಲಿ ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ರೈತರಿಗೆ ಕೃಷಿ ಚಟಿವಟಿಕೆಗಳಿಗೆ ಯಾವುದೇ ತೊಂದರೆಯಾಗದAತೆ ಕ್ರಮ ತೆಗೆದುಕೊಳ್ಳಬೇಕು. ಮತ್ತು ಜಿಲ್ಲೆಯ ಯಾವುದೇ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಕೋವಿಡ್ ನೋಡಲ್ ಅಧಿಕಾರಿಗಳು, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error