ಪಾದರಾಯನಪುರ ಗಲಭೆ ಅತ್ಯಂತ ದುರದೃಷ್ಟಕರ, ದುಷ್ಕರ್ಮಿಗಳನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು-ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್

Bangalure :  ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ‌ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು @CMofKarnataka  ಅವರನ್ನು ಒತ್ತಾಯಿಸುತ್ತೇನೆ. ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ‌ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

Please follow and like us:
error