ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೊರೋನ ಸೋಂಕು ದೃಢ: ಆರೋಗ್ಯ ಸಚಿವ ಶ್ರೀರಾಮುಲು

ಬೆಂಗಳೂರು: ನಗರದಲ್ಲಿ ಮತ್ತೆ ಇಬ್ಬರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಕೊರೋನ ಸೋಂಕು ದೃಢವಾದವರಲ್ಲಿ ಓರ್ವರು 56 ಪ್ರಾಯದವರು. ಅವರು ಅಮೆರಿಕ ಪ್ರವಾಸದಿಂದ ಮಾ.6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆ. ಅವರು ಸ್ಪೈನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿದ್ದು, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ

Please follow and like us:
error