ಬೆಂಗಳೂರಿನಲ್ಲಿ ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ಸಿಎಂ ಬಿಎಸ್ವೈ

ಬೆಂಗಳೂರು : ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ಪಿ.ಸಿ.ಮೋಹನ್, ಶಾಸಕ ಬಿ.ಜೆಡ್.ಜಮೀರ್ ಅಹ್ಮದ್  ಗಣ್ಯರು, ಹಿರಿಯ ಅಧಿಕಾರಿಗಳು, ತಜ್ಞ ವೈದ್ಯರು ಉಪಸ್ಥಿತರಿದ್ದರು.

Please follow and like us:
error