ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಪ್ರಯತ್ನಿಸಿದಲ್ಲಿ ಕಾನೂನು ಕ್ರಮ: ಡಾ.ಲಿಂಗರಾಜು

ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅಡಿ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಅವಕಾಶವಿಲ್ಲ. ಆದಾಗ್ಯೂ ಇಂತಹ ಕಾನೂನು ಬಾಹಿರ ಕ್ರಮಗಳಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಹೇಳಿದರು.
ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಎಂ.ಟಿ.ಪಿ ಕಾಯ್ದೆಯ ಅಡಿ ಬರುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ-1994 ರಡಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕುರಿತಂತೆ ಯಾವುದೇ ರೀತಿಯ ಜಾಹೀರಾತು ನೀಡುವಂತಿಲ್ಲ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಸಹಿತ ರೂ.10,000 ಗಳ ದಂಡವನ್ನು ವಿಧಿಸಲಾಗುವುದು. ಗಂಭೀರ ಪ್ರಕರಣಗಳಲ್ಲಿ ಆರೋಪ ಸಾಬೀತಾದಲ್ಲಿ ರಾಜ್ಯ ವೈದ್ಯಕೀಯ ಮಂಡಳಿಯಿAದ ಶಾಶ್ವತವಾಗಿ ಅವರ ಹೆಸರನ್ನು ತೆಗೆದು ಹಾಕಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬAಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ರೂ.50,000 ಗಳ ದಂಡವನ್ನು ವಿಧಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಅಂತಹ ಪ್ರಕರಣಗಳು ಇದುವರೆಗೂ ಪತ್ತೆಯಾಗಿಲ್ಲ. ಇನ್ನುಮುಂದೆಯೂ ಇಂತಹ ಪ್ರಕರಣಗಳು ಜರುಗದಂತೆ ಎಚ್ಚರ ವಹಿಸಲು ತಾಲ್ಲೂಕು ವೈದ್ಯಾಧಿಕಾರಿಗಳು ಆಗಾಗ ತಮ್ಮ ವ್ಯಾಪ್ತಿಯ ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿ. ಇಂತಹ ಕೃತ್ಯಗಳು ಸಲಹಾ ಸಮಿತಿ ಸದಸ್ಯರು ಅಥವಾ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು. ಅಲ್ಟಾçಸೌಂಡ್ ಸ್ಕಾö್ಯನಿಂಗ್ ಸೌಲಭ್ಯ ಹೊಂದಿರುವ ಎಲ್ಲಾ ಸೆಂಟರ್‌ಗಳು, ಜೆನೆಟಿಕ್ ಕ್ಲಿನಿಕ್ ಮತ್ತು ಜೆನೆಟಿಕ್ ಪ್ರಯೋಗಾಲಯಗಳು ಸಂಬAಧಪಟ್ಟ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಅನಧಿಕೃತವಾಗಿ ಸ್ಕಾö್ಯನಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಆಸ್ಪತ್ರೆಗಳಲ್ಲಿ ಭ್ರೂಣಲಿಂಗ ಪತ್ತೆ ಕಾರ್ಯ ಕಂಡುಬAದಲ್ಲಿ ಸ್ಕಾö್ಯನಿಂಗ್ ಯಂತ್ರವನ್ನು ಸೀಲ್ ಮಾಡಲಾಗುವುದಲ್ಲದೆ, ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಹೇಳಿದರು.
ಲಿಂಗಾನುಪಾತದ ಬಗ್ಗೆ ತಿಳುವಳಿಕೆ ನೀಡಲು ಹಾಗೂ ಪಿ.ಸಿ&ಪಿ.ಎನ್.ಡಿಟಿ ಕಾರ್ಯಕ್ರಮ ಕುರಿತು ಪಿಆರ್‌ಐ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರಗಳನ್ನು ಆಯೋಜಿಸಬೇಕು. ಯಾವುದೇ ಆಸ್ಪತ್ರೆಯ ಮರುನೋಂದಣಿ ಮಾಡಬೇಕಾದಲ್ಲಿ ಆಯಾ ಆಸ್ಪತ್ರೆಗಳನ್ನು ಮರುನೋಂದಣಿಗೆ ಅರ್ಜಿ ಸಲ್ಲಿಸಿದ 30 ದಿನಗಳೊಳಗೆ ಅನುಮೋದನೆ ಸಿಗಬೇಕು. ಗಂಗಾವತಿ, ಕೊಪ್ಪಳ ಮತ್ತು ಕಾರಟಗಿಯಲ್ಲಿ ಶಾಶ್ವತವಾಗಿ ಮುಚ್ಚಿರುವ ಆಸ್ಪತ್ರೆಗಳಲ್ಲಿ ಸ್ಕಾö್ಯನಿಂಗ್ ಯಂತ್ರಗಳನ್ನು ಸೀಲ್ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸಂಬAಧಿಸಿದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಗರ್ಭಿಣಿ ಮಹಿಳೆಯರ ಸ್ಕಾö್ಯನಿಂಗ್ ಕುರಿತಂತೆ ವಿವಿಧ ಆಸ್ಪತ್ರೆಗಳಲ್ಲಿ ವಿವಿಧ ರೀತಿಯ ಶುಲ್ಕವನ್ನು ವಿಧಿಸಲಾಗುತ್ತದೆ. ಪ್ರಕ್ರಿಯೆ ಒಂದೇ ಇರುವಾಗ ವಿವಿಧ ಶುಲ್ಕಗಳನ್ನು ವಿಧಿಸುವುದು ಸರಿಯಲ್ಲ. ಆದ್ದರಿಂದ ವೈದ್ಯರೊಂದಿಗೆ ಸಭೆ ನಡೆಸಿ ಜಿಲ್ಲೆಯಾದ್ಯಂತ ಒಂದೇ ದರವನ್ನು ನಗದಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವೈದ್ಯಕೀಯ ಸಲಹೆ ಆಧಾರಿತ ಗರ್ಭಪಾತ ಪ್ರಕರಣಗಳ ಕುರಿತು ವೈದ್ಯಾಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಗರ್ಭಪಾತಕ್ಕೆ ಎಂ.ಟಿ.ಪಿ ಕಾಯ್ದೆ ಅನ್ವಯ ನಿಗದಿಪಡಿಸಿದ ಅವಧಿಯನುಸಾರ ಸೂಕ್ತ ಮಾನದಂಡಗಳನ್ನು ಪಾಲಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಎಚ್.ಓ ಡಾ. ಜಂಬಯ್ಯ ಬಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಸ್ತಿçà ರೋಗ ತಜ್ಞ ಡಾ. ಐ.ಎಸ್.ಸವಡಿ, ರೇಡಿಯೋಲಾಜಿಸ್ಟ್ ಡಾ. ದಯಾನಂದಸ್ವಾಮಿ, ಯುನಿಸೆಫ್‌ನ ಜಿಲ್ಲಾ ಸಂಯೋಜಕ ಹರೀಶ್ ಜೋಗಿ, ಟಿ.ಎಚ್.ಓ ಗಳಾದ ಡಾ. ಗೌರಿಶಂಕರ್, ಡಾ. ರಾಮಾಂಜನೇಯ ಸೇರದಂತೆ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Please follow and like us:
error