ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ , ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ- ಹೆಚ್.ಡಿ.ಕುಮಾರಸ್ವಾಮಿ

ಕೊರೋನಾ ವ್ಯಾಪಕ‌ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ ಸಿ ಔಷಧಿ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ. ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಆಗ್ರಹಿಸುತ್ತೇನೆ ಎಂದಿದ್ದಾರೆ.

Please follow and like us:
error