”ವಿಶ್ವ ಕ್ಷಯ ರೋಗ ದಿನಾಚರಣೆ” : ಮಿನಿ ಮ್ಯಾರಾಥಾನ್ ಓಟ


ಕೊಪ್ಪಳ ಮಾ.  : ”ವಿಶ್ವ ಕ್ಷಯ ರೋಗ ದಿನಾಚರಣೆ” ಅಂಗವಾಗಿ ಕೊಪ್ಪಳದಲ್ಲಿ ಸೋಮವಾರದಂದು ಆಯೋಜಿಸಲಾದ ಮಿನಿ ಮ್ಯಾರಾಥಾನ್ ಓಟಕ್ಕೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಜಾಲನೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾ ಕೇಂದ್ರ, ಜಿಲ್ಲಾ ಆಸ್ಪತ್ರೆ, ಕೊಪ್ಪಳ ವೈದ್ಯಕೀಯ ಮಹಾ ವಿಧ್ಯಾಲಯ, ಶಿಕ್ಷಣ ಇಲಾಖೆ, ಯುವಜನ ಕ್ರೀಡಾ ಇಲಾಖೆ ಹಾಗೂ ವಿವಿಧ ಸರ್ಕಾರೇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಮಿನಿ ಮ್ಯಾರಾಥಾನ್ ಓಟವನ್ನು ಏರ್ಪಡಿಸಲಾಗಿತ್ತು.
ಮಿನಿ ಮ್ಯಾರಾಥಾನ್ ಓಟಕ್ಕೆ ಚಾಲನೆ ನೀಡಿದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರು ಮಾತಾನಾಡಿ, ಕ್ಷಯರೋಗ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿ ಮಾಡಲು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ವಿವಿಧ ಸಂಘ ಸಂಸ್ಥೆಗಳು ಹಾಗೂ ಎಲ್ಲಾ ಇಲಾಖೆಗಳ ಸಿಬ್ಬಂದಿ ವರ್ಗದವರು ಈ ಮ್ಯಾರಾಥಾನ್‌ದಲ್ಲಿ ಭಾಗವಹಿಸಿದ್ದು, ಬಹಳ ಸಂತೋಷ. ಕೊಪ್ಪಳ ಜಿಲ್ಲೆಯನ್ನು ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸುವಂತೆ ಕರೆ ನೀಡಿದರು.
ಪ್ರೊಬೇಷನರಿ ಐ.ಎ.ಎಸ್.ಅಧಿಕಾರಿ ಅಕ್ಷಯ ಶ್ರೀಧರ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ್ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮ್ಯಾರಾಥಾನ್ ಓಟವು ನಗರದ ಕಿನ್ನಾಳ ರಸ್ತೆಯ ಪ್ರವಾಸಿ ಮಂದಿರದಿಂದ ಪ್ರಾರಂಭಗೊಂಡಿತು. ಮ್ಯಾರಾಥಾನ್ ತಂಡವು ಅಶೋಕ ಸರ್ಕಲ್, ಕುಷ್ಠಗಿ ವೃತ್ತ, ಗವಿಮಠ ರಸ್ತೆ, ಗಡಿಯಾರ ಕಂಬದ ಮಾರ್ಗವಾಗಿ, ಡಾ. ಸಿಂಪಿಲಿಂಗಣ್ಣ ರಸ್ತೆ, ಕೇಂದ್ರ ಬಸ್ಸ್ ನಿಲ್ದಾಣ ಮೂಲಕ ಸರ್ಕಾರಿ ನೌಕರರ ಭವನಕ್ಕೆ ತಲುಪಿತು.