18 ರಿಂದ 44 ವರ್ಷದವರಿಗೆ ಎಲ್ಲರಿಗೂ ಕೋವಿಡ್-19 ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಕೊಪ್ಪಳ,: 18 ರಿಂದ 44 ವರ್ಷದವರಿಗೆ ಎಲ್ಲರಿಗೂ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ಜಿಲ್ಲಾಸ್ಪತ್ರೆಯಲ್ಲಿ ಇಂದು (ಮೇ 10) ಚಾಲನೆ ನೀಡಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರದಿಂದ (ಮೇ 10 ರಿಂದ) ಒಂದು ವಾರದವರೆಗೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ವ್ಯಾಕ್ಸೀನ್ ಹಾಕಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಪತ್ರಕರ್ತರಿಗೂ ಲಸಿಕೆ ;
ಕೋವಿಡ್-19ರ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪತ್ರಕರ್ತರಿಗೆ ರಾಜ್ಯ ಸರ್ಕಾರವು “ಫ್ರಂಟ್ ಲೈನ್ ವಾರಿಯರ್ಸ್” ಎಂದು ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾಡಳಿತದಿಂದ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಮಾಧ್ಯಮದವರು ಸಹ ಜಿಲ್ಲಾಸ್ಪತ್ರೆಯಲ್ಲಿ ಇಂದು ಕೊವ್ಯಾಕ್ಸೀನ್ ಪಡೆದುಕೊಂಡರು.

ವ್ಯಾಕ್ಸೀನ್ ಪಡೆದು ಫೋಟೋ ಕ್ಲಿಕ್ಕಿಸಿಕೊಂಡರು;
ಕೊವ್ಯಾಕ್ಸೀನ್ ಪಡೆದುಕೊಳ್ಳುವಂತೆ ಎಲ್ಲರಿಗೂ ಮತ್ತು ವಿಶೇಷವಾಗಿ ಯುವ ಜನರಿಗಾಗಿ ಆಕರ್ಷಿಸಲು ಹಾಗೂ ಪ್ರೇರೆಪಿಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ “ಸೆಲ್ಫಿ ಫ್ರೇಮ್” ಇಡಲಾಗಿದ್ದು, ಕೋವಿಡ್-19 ಲಸಿಕೆ ಪಡೆದುಕೊಂಡವರು ಈ ಸೆಲ್ಫಿ ಫ್ರೇಮ್ ನಲ್ಲಿ ನಿಂತುಕೊಂಡು ಫೋಟೋ ಕ್ಲಿಕ್ಕಿಸಿ, “ನಾನು ಕೋವಿಡ್ ಲಸಿಕೆ ಪಡೆದಿರುವಿ, ನೀವು ಪಡೆಯಿರಿ” “ಬನ್ನಿ ಕರೋನಾ ವಿರುದ್ಧ ಹೋರಾಡಲು ಕೈಜೋಡಿಸೋಣ” ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರ ಡಾ.ಟಿ. ಲಿಂಗರಾಜು. ಆರ್.ಸಿ.ಹೆಚ್ ಅಧಿಕಾರಿ ಡಾ. ಜಂಬಯ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಜಿ.ಸುರೇಶ್ ಸೇರಿದಂತೆ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Please follow and like us:
error