54 ಆರೋಪಿಗಳ ಬಂಧನ, ಮತ್ತಷ್ಟು ಕಿಡಿಗೇಡಿಗಳ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ

54 ಆರೋಪಿಗಳ ಬಂಧನ, ಮತ್ತಷ್ಟು ಕಿಡಿಗೇಡಿಗಳ ವಿರುದ್ಧ ಕ್ರಮ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಎ.20: ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಗೃಹಸಚಿವರು, ಬಳಿಕ ಮಾಧ್ಯಮದವೊಂದಿಗೆ ಮಾತನಾಡುತ್ತಿದ್ದರು.

ಪಾದರಾಯನಪುರದಲ್ಲಿ ವೈದ್ಯಕೀಯ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿ ಹಲ್ಲೆ ನಡೆಸುವ ಪ್ರಯತ್ನ ಮಾಡಲಾಗಿದೆ. ಘಟನೆಯ ಕೆಲವೇ ಗಂಟೆಗಳಲ್ಲಿ 54 ಮಂದಿಯನ್ನು ಬಂಧಿಸಲಾಗಿದೆ. ಮತ್ತಷ್ಟು ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಬಂಧಿತರ ವಿರುದ್ಧ ಎನ್‌ಡಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಘಟನೆ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಸೆಕೆಂಡರಿ ಕಾಂಟ್ಯಾಕ್ಟ್ ಇರುವ ಜನ ಸ್ವಯಂಪ್ರೇರಿತವಾಗಿ ಕ್ವಾರಂಟೈನ್‌ಗೆ ಸಹಕಾರ ನೀಡದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ. ಕೋವಿಡ್ ತಡೆಗೆ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ. ಜನತೆ ಸರ್ಕಾರದ ಜತೆ ಸಹಕರಿಸಬೇಕು. ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಸಮಸ್ಯೆ ಮಾಡಿದರೆ ಕಠೋರ ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಸಿದ್ದಾರೆ.

ಕೊರೋನ ತಡೆಯುವ ನಿಟ್ಟಿನಲ್ಲಿ ಯಾವಾಗ ಏನು ಕ್ರಮ ಕೈಗೊಳ್ಳಬೇಕಿದೆ ಎಂಬುದು ಸರಕಾರಕ್ಕೆ ತಿಳಿದಿದೆ. ಶಾಸಕ ಝಮೀರ್ ಅಹ್ಮದ್ ಏನೇ ಹೇಳಿಕೆ ನೀಡಿದರೂ ಅವರು ಸರಕಾರವಲ್ಲ. ಯಾರು ಯಾವಾಗ ಹೇಗೆ ನಡೆದುಕೊಳ್ಳಬೇಕು ಎಂಬುದು ಅಧಿಕಾರಿಗಳಿಗೆ ತಿಳಿದಿದೆ. ನಾವು ಇಂತಹ ಪುಂಡರನ್ನು ಮಟ್ಟ ಹಾಕದೆ ಬಿಡುವುದಿಲ್ಲ ಎಂದವರು ತಿಳಿಸಿದ್ದಾರೆ.

Please follow and like us:
error