ಅಂಫಾನ್’ ಚಂಡಮಾರುತಕ್ಕೆ ಪಶ್ಚಿಮ ಬಂಗಾಳದಲ್ಲಿ 72 ಮಂದಿ ಬಲಿ: ಮಮತಾ ಬ್ಯಾನರ್ಜಿ

ಹೊಸದಿಲ್ಲಿ: ‘ಅಂಫಾನ್’ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಸುಮಾರು 72 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ‘ಅಂಫಾನ್’ ಹಾವಳಿಯಿಂದ 72 ಮಂದಿ ಮೃತಪಟ್ಟಿದ್ದಾರೆ. ಚಂಡಮಾರುತದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಧನ ಘೋಷಿಸಲಾಗಿದೆ , ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿಯವರು ಭೇಟಿ ನೀಡಿ ಹಾನಿಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ನಾನು ವಿನಂತಿಸುತ್ತಿದ್ದೇನೆ ಎಂದರು.

Please follow and like us:
error