ಅಕ್ರಮ ಪಂಪಸೆಟ್ ತೆರವಿಗೆ ಕ್ರಮ : ರಮೇಶ್ ಜಾರಕಿಹೊಳಿ


ಕೊಪ್ಪಳ, : ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಕಾನೂನು ವ್ಯಾಪ್ತಿ ಮೀರಿ ಹೊಲಗಳಿಗೆ ಪಂಪ್‌ಸೆಟ್ ಮೂಲಕ ಕಾಲುವೆ ನೀರನ್ನು ಸರಬರಾಜು ಮಾಡಿಕೊಳ್ಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದ್ದು, ಕಾಲುವೆ ನೀರನ್ನು ಅಕ್ರಮವಾಗಿ ಬಳಸಬೇಡಿ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ.
ಹರಿಯುತ್ತಿರುವ ಕಾಲುವೆ ನೀರನ್ನು ಪಂಪ್‌ಸೆಟ್‌ಗಳನ್ನು ಅಳವಡಿಸಿ ಹೊಲಗಳಿಗೆ ನೀರು ಹೋಗುವಂತೆ ಮಾಡುವುದು ಕಾನೂನಿಗೆ ವಿರುದ್ಧವಾಗಿದ್ದು ಇಂತಹ ಪಂಪ್‌ಸೆಟ್‌ಗಳನ್ನು ಅಳವಡಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಕಾನೂನಿಗೆ ವಿರುದ್ಧವಾಗಿ ಪಂಪ್‌ಸೆಟ್‌ಗಳನ್ನು ಅಳವಡಿಸಿ ನೀರೆತ್ತುವ ಘಟನೆಗಳು ಎಲ್ಲೆಡೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಶೀಘ್ರವಾಗಿ ಉನ್ನತ ಮಟ್ಟದ ಸಭೆ ಕರೆಯಲಾಗುವುದು. ಆದ್ದರಿಂದ ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ರೈತರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನು ಸ್ಥಗಿತಗೊಳಿಸುವಂತೆ ಸಚಿವರು ಪ್ರಕಟಣೆ ಮೂಲಕ ರೈತರಲ್ಲಿ ಮನವಿ ಮಾಡಿದ್ದಾರೆ.

Please follow and like us:
error