ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಎಂ.ಪಿ. ಮಾರುತಿ


ಕೊಪ್ಪಳ,  : ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಈ ಬಾರಿಯ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಸಂಬAಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸೆಪ್ಟೆಂಬರ್.17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟç ಧ್ವಜಾರೋಹಣ ನೆರವೇರಿಸುವರು. ನಂತರ ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸುವ ಪ್ರಯುಕ್ತ ಹೆಚ್ಚು ಜನರು ಸೇರದಂತೆ ಕ್ರಮ ಕೈಗೊಳ್ಳಬೇಕು. 10 ವರ್ಷ ಕೆಳಗಿನ ಮಕ್ಕಳು, 60 ವರ್ಷ ಮೇಲ್ಪಟ್ಟವರು ಕಾರ್ಯಕ್ರಮಕ್ಕೆ ಬರದಂತೆ ಎಚ್ಚರ ವಹಿಸಬೇಕು. ಆರೋಗ್ಯ ಇಲಾಖೆಯವರು ಕ್ರೀಡಾಂಗಣಕ್ಕೆ ಬರುವ ಎಲ್ಲರಿಗೂ ಥರ್ಮಲ್ ಸ್ಕಿçÃನಿಂಗ್ ಮಾಡಿ ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ನಗರಸಭೆ ಪೌರಾಯುಕ್ತರು ಕ್ರೀಡಾಂಗಣದ ಸ್ವಚ್ಛತೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಕ್ರೀಡಾಂಗಣದಲ್ಲಿ ಪಥಸಂಚಲನ ನಡೆಯಲಿದ್ದು ನಿಗದಿತ ಸಂಖ್ಯೆಯ ತಂಡಗಳು ಮಾತ್ರ ಭಾಗವಹಿಸಬೇಕು. ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಕ್ರೀಡಾಂಗಣದ ಅಲಂಕಾರ, ಲಘು ಉಪಹಾರ, ಪೊಲೀಸ್ ಭದ್ರತೆ, ವಿದ್ಯುತ್ ಅಲಂಕಾರ ಮುಂತಾದವುಗಳ ಕುರಿತು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾ ಸಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತಹಶೀಲ್ದಾರ ಜೆ.ಬಿ.ಮಜ್ಗಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಬಿಸಿಎಂ ಜಿಲ್ಲಾ ಅಧಿಕಾರಿ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error