ಅಗಸರು, ಕ್ಷೌರಿಕರಿಗೆ ರೂ. 5 ಸಾವಿರ ಪರಿಹಾರ  ಪಡೆಯಲು  ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ


ಕೊಪ್ಪಳ:  ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ 5000 ರೂ.ಗಳ ಪರಿಹಾರ ವಿತರಿಸಲಾಗುತ್ತಿದ್ದು, ಅಗಸರು ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸೌಲಭ್ಯ ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ ಇಲಾಖೆಯ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದಲ್ಲಿ, ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಆಧಾರ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರವನ್ನು ವರ್ಗಾಯಿಸಲಾಗುವುದು.
ಕರ್ನಾಟಕದ ಅಗಸ ಹಾಗೂ ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ (ಕುಟುಂಬದಲ್ಲಿ ಒಬ್ಬರಿಗೆ ಮಾತ್ರ) ಪರಿಹಾರ ಪಡೆಯಲು ಅರ್ಹರಾಗಿದ್ದು, ಫಲಾನುಭವಿಗಳ ವಯೋಮಿತಿ 18 ರಿಂದ 65 ವರ್ಷದೊಳಗಿರಬೇಕು. ರಾಜ್ಯದಲ್ಲಿ ಬಿಪಿಎಲ್ ಕಾರ್ಡ ಹೊಂದಿರಬೇಕು, ಕಡ್ಡಾಯವಾಗಿ ಆಧಾರ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
ಫಲಾನುಭವಿಗಳ ಪೂರಕ ದಾಖಲೆಗಳಾದ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕುರಿತು ನಿಗಧಿತ ನಮೂನೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಥವಾ ಕಾರ್ಯದರ್ಶಿಗಳಿಂದ, ನಗರ ಪ್ರದೇಶಗಳಲ್ಲಿ ನಗರಸಭೆ ಅಥವಾ ಪುರಸಭೆ ಅಥವಾ ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ ಅಥವಾ ಕಂದಾಯ ನಿರೀಕ್ಷಕರು, ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು ಅಥವಾ ಉಪತಹಶೀಲ್ಧಾರರು ಕಂದಾಯ ಅಧಿಕಾರಿಗಳು ಅಥವಾ ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು ಅಥವಾ ಕಾರ್ಮಿಕ ಅಧಿಕಾರಿಗಳು ಅಥವಾ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಕಾರ್ಮಿಕ ನಿರೀಕ್ಷಕರುಗಳಿಂದ ಪಡೆದ ಉದ್ಯೋಗ ದೃಡಿಕರಣ ಪತ್ರ, ನಿಗಧಿತ ನಮೂನೆಯಲ್ಲಿ ಸ್ವಯಂಘೋಷಣೆ ಪತ್ರ, ಬಿ.ಪಿ.ಎಲ್ ಕಾರ್ಡ, ಆಧಾರ ಕಾರ್ಡ, ಜನ್ಮ ದಿನಾಂಕ ದಾಖಲೆ ಹಾಗೂ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರದೊಂದಿಗೆ ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಜೂನ್ 30ರೊಳಗಾಗಿ ಸಲ್ಲಿಸಬೇಕು.

Please follow and like us:
error