fbpx

ಅತೀಕುರ್ ರಹ್ಮಾನ್ ಬಿಡುಗಡೆಗೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ

ಕೊಪ್ಪಳ:- ಉತ್ತರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಹಾಗೂ ಸಂತ್ರಸ್ತೆಯ ಮನೆಗೆ ಭೇಟಿನೀಡುವ ವೇಳೆ ಬಂಧನಕ್ಕೊಳಗಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಕೋಶಾಧಿಕಾರಿಯ ಬಿಡುಗಡೆಗೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ವತಿಯಿಂದ ಪ್ರತಿಭಟನೆಯು ಕೊಪ್ಪಳದ ಅಶೋಕ ವೃತ್ತದ ಬಳಿ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಹುಸೇನ್ ಭಾಷಾ ಮತ್ತು ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಅಫ್ಜಲ್, ಅತೀಕ್, ಇರ್ಫಾನ್, ಆವೇಜ್ ಹಾಗೂ ವಿದ್ಯಾರ್ಥಿಗಳು ಉಪಸ್ತಿತರಿದ್ದರು.

Please follow and like us:
error
error: Content is protected !!