ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಮಾರ್ಚ್.15 ಕೊನೆ ದಿನ

ಕೊಪ್ಪಳ,  ): ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡಿರುವವರು ಸ್ವಯಂ ಪ್ರೇರಿತವಾಗಿ ಕೊಪ್ಪಳ ತಾಲೂಕಿನ ತಹಶೀಲ್ದಾರ ಕಛೇರಿಯ ಆಹಾರ ಶಾಖೆಗೆ ಅಥವಾ ಆಯಾ ಗ್ರಾಮದ ನ್ಯಾಯಬೆಲೆ ಅಂಗಡಿ ವಿತರಕರಿಗೆ ಮಾರ್ಚ್.15 ರೊಳಗಾಗಿ ಹಿಂತಿರುಗಿಸದಿದ್ದರೆ ಅಂತಹವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಮತ್ತು ಅಂತಹವರ ವಿರುದ್ಧ ದಂಡ ವಸೂಲಿ ಮಾಡಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ತಹಶೀಲ್ದಾರರು ತಿಳಿಸಿದ್ದಾರೆ.
ಈಗಾಗಲೇ ಸರ್ಕಾರದ ಮಾನದಂಡಗಳನ್ನು ಉಲ್ಲಂಘಿಸಿ ಸಾರ್ವಜನಿಕರು ಪಡೆದಿರುವ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತವಾಗಿ ತಾಲೂಕಿನ ಆಹಾರ ಶಾಖೆಗೆ ಒಪ್ಪಿಸಲು ಆದೇಶ ಹೊರಡಿಸಲಾಗಿತ್ತು. ಅದರಂತೆ ಫೆಬ್ರವರಿ 5, 2021 ರಿಂದ ಇಂದಿನವರೆಗೆ ಕೇವಲ 450 ಪಡಿತರ ಚೀಟಿಗಳ ಅನರ್ಹ ಫಲಾನುಭವಿಗಳು ಸ್ವಯಂ ಪ್ರೇರಿತವಾಗಿ ನ್ಯಾಯಬೆಲೆ ಅಂಗಡಿ ವಿತರಕರಿಗೆ ಮತ್ತು ತಾಲೂಕಿನ ಆಹಾರ ಶಾಖೆಗೆ ಒಪ್ಪಿಸಿದ್ದಾರೆ. ಆದರೆ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅನರ್ಹ ಫಲಾನುಭವಿಗಳು ಇರುವುದು ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಸರಕಾರಿ ನೌಕರರು, ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲ ಖಾಸಗಿ ನೌಕರರು, ಸರಕಾರಿ ಅನುದಾನಿತ ಮಂಡಳಿಗಳು, ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೆರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಬೇಕು.
ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ವಾಣಿಜ್ಯ ವಾಹನ (ಟ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ) ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಕುಟುಂಬಗಳು, ನಿವೃತ್ತ ನೌಕರರು ಹಾಗೂ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿ ಒಟ್ಟಿಗೆ ವಾಸಿಸುತ್ತಿದ್ದರೂ, ಒಂದಕ್ಕಿAತ ಹೆಚ್ಚು ಪಡಿತರ ಚೀಟಿ ಪಡೆದಿರುವವರು, ಮರಣ ಹೊಂದಿದ ಸದಸ್ಯರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು, ಪಡಿತರ ಚೀಟಿಯನ್ನು ರದ್ದುಗೊಳಿಸದೇ ಇರುವುದು, ಪಡಿತರ ಚೀಟಿಗಾಗಿ ಜಂಟಿ ಕುಟುಂಬಗಳನ್ನು ವಿಭಜಿಸಿಕೊಂಡು ಕೃತಕ ಕುಟುಂಬಗಳ ಹೆಸರಿನಲ್ಲಿ ಪಡೆದಿರುವ ಪಡಿತರ ಚೀಟಿಗಳ ಕುಟುಂಬಗಳು ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು ಎಂದು ತಿಳಿಸಿದ್ದಾರೆ.

Please follow and like us:
error