ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನ ಕಡಿತ ಅಭಿವೃದ್ದಿಗೆ ಹಿನ್ನಡೆಯಾಗಲಿದೆ: ಸೈಯದ್ ಖಾಲೀದ್


ಗದಗ: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅನುದಾನು ಕಡಿತ ಮಾಡಿರುವುದು ಇಡೀ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿ ಮತ್ತು ಜೈನ ಸಮುದಾಯಗಳ ಅಭಿವೃದ್ದಿಗೆ ಹಿನ್ನಡೆಯಾಗಲಿದೆ ಇದನ್ನು ಮುಸ್ಲಿಂ ಚಿಂತಕರ ಚಾವಡಿಯು ತೀವ್ರವಾಗಿ ಖಂಡಿಸುತ್ತೇವೆ ಎಂದು ಯುವ ಮುಖಂಡ ಸೈಯದ್ ಖಲೀದ ಕೊಪ್ಪಳ ಹೇಳಿದರು.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅನುದಾನ ಕಡಿತಗೊಳಿಸಿರುವದನ್ನು ಖಂಡಿಸಿ ಗದಗ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
ವಿದೇಶದಲ್ಲಿ ಉನ್ನತ ವ್ಯಾಸಂಗದ ಯೋಜನೆ, ನಾಗರೀಕ ಪರೀಕ್ಷೆ ತರಬೇತಿ ಯೋಜನೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿಯಂತಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದಂತಹ ಯೋಜನೆಗಳ ೨೦೧೯-೨೦ನೇ ಸಾಲಿನ ಅನುದಾನ ಸರಕಾರ ಇಲ್ಲಿಯವರೆಗೆ ಬಿಡುಗಡೆಗೊಳಿಸದೇ ಇರುವದು ವಿದ್ಯಾರ್ಥಿಗಳಿಗೆ ಆರ್ಥಿಕ ಎದುರಾಗಿದೆ. ರಾಜ್ಯದಲ್ಲಿ ೨೦೧೬-೧೭ರಿಂದ ಜಾರಿಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಸಂಶೋಧನೆ (ಪಿ.ಎಚ್.ಡಿ./ಎಂ.ಫೀಲ್) ಕೈಗೊಳ್ಳಲು ಪ್ರತಿ ತಿಂಗಳು ನೀಡಲಾಗುತ್ತಿದ್ದ ಪ್ರೋತ್ಸಾಹಧನ ೨೫೦೦೦.ರೂಗಳನ್ನು ೮೩೩೩.ರೂಗಳಿಗೆ ಕಡಿತಗೊಳಿಸಿ ಯಾರೂ ಸಂಶೋಧನೆಯನ್ನು ಬಡ ವರ್ಗದ ಮಕ್ಕಳು ಶೈಕ್ಷಣಿಕ ಹಕ್ಕನ್ನುಕಸಿದುಕೊಳ್ಳುವ ಹುನ್ನಾರದ ನಡೆಸಿದೆ ಎಂದರು.

ಮುಸ್ಲಿಂ ಚಿಂತಕರ ಚಾವಡಿಯ ಜಿಲ್ಲಾ ಮುಖಂಡ ಆರ್.ಕೆ.ಬಾಗವಾನ ಮಾತನಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆ ನಿಗದಿಗೊಳಿಸುತ್ತ ಬಂದಿರುವ ಅನುದಾನ ಕಡಿತಗೊಳಿಸಿದ್ದಲ್ಲದೇ ಹಲವು ಯೋಜನೆಗಳನ್ನು ಕೈ ಬಿಡಲಾಗಿದ್ದು ೨೦೧೯-೨೦ನೇ ಸಾಲಿನಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್ ನಲ್ಲಿ ಘೋಷಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ೧೮೯೭.೦೦ಕೋ.ರೂ.ಗಳಿಂದ ಇದೀಗ ಮತ್ತೆ ೧೦೦೫. ಕೋಟಿ. ಅನುದಾನ ಕಡಿತಗೊಳಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ ೫ ವ?ಗಳಿಂದ ಜಾರಿಯಲ್ಲಿಟ್ಟಿದ್ದ ಹಲವು ಜನಪರ ಕಲ್ಯಾಣ ಯೋಜನೆಗಳ ಅನುದಾನ ಕಡಿತಗೊಳಿಸಿರುವುದರಿಂದ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ದಿಗೆ ಹಿನ್ನಡಯಾಗಲಿದೆ ಕೂಡಲೇ ಸರ್ಕಾರ ಇಲಾಖೆಗೆ ನೀಡುತ್ತಿದ್ದ ಅನುದಾನವನ್ನು ಯಾಥಾವತ್ತಾಗಿ ಮುಂದುವರೆಸಲು ಒತ್ತಾಯಿಸಿದರು.
೨೦೨೦-೨೧ನೇ ಸಾಲಿನಲ್ಲಿ ರಾಜ್ಯಾದ್ಯಂತ ಸುಮಾರು ೩೦೦ ವಿದ್ಯಾರ್ಥಿಗಳು ಸಂಶೋಧನೆಗಾಗಿ ಪ್ರೋತ್ಸಾಹ ಧನ ಪಡೆಯುತ್ತಿದ್ದರೂ, ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ೩.ಲಕ್ಷರೂ. ಆದರೂ ಒಟ್ಟು ೩೦೦ವಿದ್ಯಾರ್ಥಿಗಳಿಗೆ ಈ ಮೊತ್ತ ೯.೦ಕೋ.ರೂ. ಆಗುತ್ತದೆ, ಆದರೆ ಸರಕಾರ ಇ? ಮೊತ್ತಕ್ಕಾಗಿ ೩೦೦ ವಿದ್ಯಾರ್ಥಿಗಳ ಸಂಶೋಧನೆಗೆ ಅಡ್ಡಿಯುಂಟುಮಾಡಿರುವುದು ಆತಂಕದ ವಿ?ಯವಾಗಿದೆ. ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ವಾರ್ಷಿಕವಾಗಿ ಕರ್ನಾಟಕ ರಾಜ್ಯದಿಂದ ಸುಮಾರು ೧೨ಲಕ್ಷ ೫೦ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರ ಸೇರಿ ಒಟ್ಟು ೨೭೦.೦೦ ಕೋ.ರೂ. ಅನುದಾನ ನಿಗದಿಗೊಳಿಸಲಾಗಿತ್ತು, ಆದರೆ ೨೦೧೯-೨೦ನೇ ಸಾಲಿನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆಗೊಳಿಸದೇ ಇರುವದರಿಂದ ಶೇ೫೦ರ? ವಿದ್ಯಾರ್ಥಿಗಳು ಕಳೆದ ವ?ದ ವಿದ್ಯಾರ್ಥಿ ವೇತನ ಪಡೆಯಲು
ಸಾದ್ಯವಾಗಿಲ್ಲ. ಈಗಲೂ ಈ ವಿದ್ಯಾರ್ಥಿ ವೇತನಕ್ಕಾಗಿ ಜಾತಕ ಪಕ್ಷಿಯಂತೆ ಕಾಯುವ ಪರಿಸ್ಥಿತಿ ಬಡ ಅಲ್ಪಸಂಖ್ಯಾತ ವಿದ್ಯಾರ್ಥಿಗಳದ್ದಾಗಿದೆ. ಶುಲ್ಕವಿನಾಯತಿ ಯೋಜನೆಯು ೧೯೮೦ರಿಂದ ರಾಜ್ಯದಲ್ಲಿ ಎಲ್ಲ ಹಿಂದುಳಿದ ವಿದ್ಯಾರ್ಥಿಗಳಿಗೆ ಜಾರಿಯಲ್ಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಪ್ರತ್ಯೇಕಗೊಂಡ ನಂತರ ೨೦೧೪ರಿಂದ ಅರ್ಜಿ ಸಲ್ಲಿಸಿದ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತ ಬಂದಿದೆ. ಆದರೆ, ೨೦೧೯-೨೦ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಈಗಲೂ ಅನುದಾನ ಬಿಡುಗಡೆಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿ? ಡೋಲಾಯನಮಾನವಾಗಿದೆ. ಎಂದರು.

ಶೈಕ್ಷಣಿಕ ಸಾಲದ ಯೋಜನೆ ಸಹ ಈ ವ? ದಾರಿ ತಪ್ಪಿದೆ, ಈ ಯೋಜನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತಗೊಳ್ಳುವಂತೆ ಮಾಡಿದೆ. ಅರಿವು ಯೋಜನೆಯ ಮೂಲಕ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನಿಗಮದಿಂದ ಶೈಕ್ಷಣಿಕ ಸಾಲ ನೀಡಲಾಗುತ್ತಿತ್ತು, ಈ ವ? ಸದರಿ ಸಾಲವನ್ನು ವಿದ್ಯಾರ್ಥಿಗಳು ಕೋರ್ಸುಗಳಿಗೆ ಪಾವತಿಸುವ ಮೊತ್ತದ ಅರ್ದ ಮೊತ್ತ ಮಾತ್ರ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಸಾಲದ ರೂಪದಲ್ಲಿ ನೀಡುತ್ತಿದೆ. ಒಂದು ಕಡೆ ಪ್ರೋತ್ಸಾಹಧನ ಕಡಿತಗೊಳಿಸಿ, ಮತ್ತೊಂದು ಕಡೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ, ಮೆರಿಟ್-ಕಮ್ ಮೀನ್ಸ್ ವಿದ್ಯಾರ್ಥಿ ವೇತನದ ಅನುದಾನ ಕಡಿತಗೊಳಿಸಿದ್ದಲ್ಲದೇ ಶುಲ್ಕವಿನಾಯತಿ, ವಿದ್ಯಾಸಿರಿ ಅನುದಾನವೂ ಸರಕಾರ ನೀಡುತ್ತಿಲ್ಲ, ಇದನ್ನು ಹೊರತುಪಡಿಸಿ ಇದ್ದಂತಹ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಮೊಟುಕುಗೊಳಿಸಲು ಹೊರಟಿರುವದು ಸರಕಾರ ಅಲ್ಪಸಂಖ್ಯಾತ ಸಮುದಾಯವನ್ನು ಸಂಪೂರ್ಣ ಮೂಲೆಗುಂಪು ಮಾಡುವ ಶಪಥ ಮಾಡಿದೆ ಎನ್ನುವಂತಿದೆ.
ಬಾಕ್ಸ:
ಅನುದಾನ ಕಡಿತಗೊಳಿಸಲು ಕೋವಿಡ್-೧೯ ಕಾರಣವಿದ್ದರೂ ಯಾವುದೇ ಸರಕಾರ ಜನಪರ ಕಲ್ಯಾಣ ಇಲಾಖೆಗಳ ಯೋಜನೆಗಳನ್ನು ಕಡಿತಗೊಳಿಸುವದು ಸಾಮಾಜಿಕ ಬದ್ದತೆಯ ದೃಷ್ಟಿಯಿಂದ ಒಳ್ಳೆಯ ಆಡಳಿತದ ಮಾದರಿಯಾಗಲಾರದು. ಸರಕಾರದಲ್ಲಿ ಯಾವುದೇ ಇಲಾಖೆಗೂ ಇರದ ಅನುದಾನ ಕಡಿತ ಕೇವಲ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಮಾತ್ರ ಏಕೆ ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ.
-ದಾವಲಸಾಬ ತಾಳಿಕೋಟಿ
ಕರ್ನಾಟಕ ರಾಜ್ಯ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂದಿಸಿದ ಯಾವುದೇ ಹೊಸ ಯೋಜನೆ ಜಾರಿಗೊಳಿಸದೇ ಇದ್ದರೂ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರೆಸಬೇಕು, ಸದರಿ ಯೋಜನೆಗಳನ್ನು ಮುಂದುವರೆಸಲು ಬೇಕಾಗುವ ಅನುದಾನವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು.
ಮಹ್ಮದ ಶಫಿ ನಾಗರಕಟ್ಟಿ, ಭಾಷಾಸಾಬ ಮಲಸಮುದ್ರ, ಎಂ.ಎ.ಕುರಹಟ್ಟಿ, ಶೌಕತ್ ಕಾತರಕಿ, ಅಕ್ಬರ ಅಲಿಬೇಗ, ದಾವುದ್ ಜಾಮಾಲ್, ಮುನ್ನಾ ಡಾಲಾಯತ್, ಖಾಸಿಂ ಧಾರವಾಡ, ತನ್ವೀರ ಹಾಜಿ., ಮೈನುದ್ದೀನ್ ನದಾಫ್, ದಾದು ಮುಂಡರಗಿ, ಎಂ.ಡಿ.ಇಸ್ಮಾಯಿಲ್, ಜಾಫರ ಡಾಲಾಯತ್, ದಾವಲಸಾಬ ತಾಳಿಕೋಟಿ. ಇತರರು ಭಾಗವಹಿಸಿದ್ದರು.

Please follow and like us:
error