ಆರೋಗ್ಯ ಸ್ಥಿತಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ. 11: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದ್ದು, ತಪಾಸಣೆ ಬಳಿಕ ಮನೆಗೆ ಮರಳಿದ್ದಾರೆ ಎಂದು ಗೊತ್ತಾಗಿದೆ.

ಸಿದ್ದರಾಮಯ್ಯ ಅವರ ಅರೋಗ್ಯದಲ್ಲಿ ಯಾವುದೇ ವ್ಯತ್ಯಾಸಗಳಿಲ್ಲ. ಆದರೆ, ಸಿದ್ದರಾಮಯ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆಂಬ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಲಾಗಿದೆ.

ಈ ಸಂಬಂಧ ಬುಧವಾರ ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ‘ನಾನು ಆರೋಗ್ಯವಾಗಿದ್ದೇನೆ, ನಿಯಮಿತವಾದ ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ’ ಎಂದು ತಿಳಿಸಿದ್ದಾರೆ.

Please follow and like us:
error