fbpx

ಆರ್ಯ ವೈಶ್ಯ ಸಮುದಾಯದ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣೆ

ನಿಗಮದ ಸೌಲಭ್ಯ ಪಡೆದು ಅಭಿವೃದ್ಧಿಯಾಗಿ, ಸಕಾಲಕ್ಕೆ ಸಾಲ ಹಿಂತಿರುಗಿಸಿ : ಡಿ.ಎಸ್. ಅರುಣ್
ಕೊಪ್ಪಳ, ): ಸಮುದಾಯವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸ್ವಾವಲಂಬಿಯಾಗಲು ನಿಗಮದಿಂದ ಜಾರಿಗೆಗೊಂಡ ಯೋಜನೆಗಳನ್ನು ಸದುಪಯೋಗಿಸಿಕೊಂಡು ಅಭಿವೃದ್ಧಿಯಾಗುವುದರ ಜೊತೆಗೆ ಪಡೆದ ಸಾಲವನ್ನು ಸಕಾಲಕ್ಕೆ ಹಿಂತಿರುಗಿಸಬೇಕು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಡಿ.ಎಸ್.ಅರುಣ್ ವರು ಹೇಳಿದರು.
ಜಿಲ್ಲಾ ಪಂಚಾಯತ್ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾದ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಣೆ ಹಾಗೂ ಮರುಪಾವತಿ ಕುರಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 10 ಲಕ್ಷದಷ್ಟು ಆರ್ಯವೈಶ್ಯ ಸಮುದಾಯದವರಿದ್ದು, ಸಮಾಜದ ಕಡುಬಡವರನ್ನು ಮೇಲೆತ್ತುವ ಉದ್ದೇಶದಿಂದ ಸರ್ಕಾರವು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿದೆ.  ಆರ್ಯ ಸಮುದಾಯವು ಉಗಮಗೊಂಡು ಹತ್ತು ವರ್ಷಗಳು ಪೂರೈಸಿದ್ದು, ಸಮುದಾಯವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸ್ವಾವಲಂಬಿಯಾಗಲು ನಿಗಮದಿಂದ ಜಾರಿಗೆಗೊಂಡ ಯೋಜನೆಗಳನ್ನು ಸಮುದಾಯದ ಪ್ರತಿಯೊಬ್ಬರು ಸದುಪಯೋಗಿಸಿಕೊಳ್ಳಬೇಕು.  ಸಾಲ ಪಡೆದ ಫಲಾನುಭವಿಗಳು ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದು ಅಲ್ಪ ಮೊತ್ತವಾದರೂ ಅದರ ಸದುಪಯೋಗ ಪಡೆದುಕೊಳ್ಳಿ.  ಒಳ್ಳೆಯ ಕೆಲಸಕ್ಕೆ ಬಳಸಿ ಅಭಿವೃದ್ಧಿ ಹೊಂದಬೇಕು.
ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ಸೌಲಭ್ಯ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಯೋಜನೆಗಳನ್ನು ಇದೇ ಮೊದಲ ಬಾರಿಗೆ ರಾಜ್ಯದಾದ್ಯಂತ ಆರಂಭಿಸಲಾಗಿದೆ.  ಕೊಪ್ಪಳ ಜಿಲ್ಲೆಯಿಂದ 97 ಫಲಾನುಭವಿಗಳಿಗೆ ತಲಾ ರೂ. 1 ಲಕ್ಷ  ಸಾಲ ನೀಡಲಾಗುತ್ತಿದೆ.  ಆರ್ಯ ವೈಶ್ಯ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ಆರಂಭಿಸಲಾಗಿದೆ.  ಈ ಯೋಜನೆಯಡಿ ಇಂಜಿನಿಯರಿAಗ್, ವೈದ್ಯಕೀಯ, ದಂತವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶೇ.2ರ ಬಡ್ಡಿದರದಲ್ಲಿ ಗರಿಷ್ಠ 1 ಲಕ್ಷ ರೂ ಶೈಕ್ಷಣಿಕ ಸಾಲ ಮಂಜೂರು ಮಾಡಲಾಗುವುದು ಎಂದು ಹೇಳಿದರು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿದ ಅರ್ಜಿದಾರರು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ 1 ಲಕ್ಷ ರೂ ಆರ್ಥಿಕ ನೆರವು ಒದಗಿಸಲಾಗುವುದು.   ಸಾಂಪ್ರದಾಯಕ ವೃತ್ತಿಗಳಲ್ಲದೆ ಹಸು ಸಾಕಾಣಿಕೆ, ಸೇವಾ ಚಟುವಟಿಕೆಗಳು ಚಕ್ಕಲಿ, ನಿಪ್ಪಟ್ಟು ತಯಾರಿಸಿ ಮಾರಾಟ ಮಾಡುವ ಸಣ್ಣ ವ್ಯಾಪಾರಿಗಳು ಸಹ ಈ ನೆರವು ಪಡೆದುಕೊಳ್ಳಬಹುದು. ಯೋಜನೆ ಅಡಿ ಕನಿಷ್ಠ 50 ಸಾವಿರ ರೂ. ನೆರವು ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. 20 ರಷ್ಟು ಸಹಾಯಧನವಾಗಿ ಉಳಿದ ಮೊತ್ತವನ್ನು ಸಾಲದ ರೂಪದಲ್ಲಿ ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ನೀಡಲಾಗುವುದು. ಅರ್ಜಿದಾರರು 45 ವರ್ಷಕ್ಕಿಂತ ಒಳಗಿನ ವರಾಗಿರಬೇಕು.  ನಿಗಮದ ಯೋಜನೆಯ ನೆರವು ಸುಲಭವಾಗಿ ಪಡೆಯಲು ಹಾಗೂ ಶಾಲಾ ಪ್ರವೇಶಕ್ಕೆ ಅರ್ಜಿಸಲ್ಲಿಸಲು, ಸರ್ಕಾರಿ ಸಂಸ್ಥೆಗಳಿAದ ಸಾಲ ಸೌಲಭ್ಯ, ಸಹಾಯಧನ ಮತ್ತು ತರಬೇತಿ ಪಡೆಯಲು ಜಾತಿ ಮತ್ತು  ಆದಾಯ ಪ್ರಮಾಣ ಪತ್ರವೂ ಕಡ್ಡಾಯವಾಗಿದೆ. ಆದರೆ ಈ ಮೊದಲು ಜಾತಿ ಪ್ರಮಾಣ ಪತ್ರ ನೀಡುತ್ತಿರಲಿಲ್ಲ. ಕ್ಯಾಬಿನೆಟ್ನಲ್ಲಿ ಅನುಮತಿ ಪಡೆದು ಡಿಸೆಂಬರ್ 16 ರಿಂದ ನೀಡಲಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಇದರ ನೆರವು ಪಡೆದುಕೊಂಡು ಸರ್ಕಾರದಿಂದ ಬರುವ ಎಲ್ಲಾ ಸೌಲತ್ತುಗಳು ಗಳೊಂದಿಗೆ ಈ ನಿಗಮದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಿ ಎಂದು ವಿನಂತಿಸಿಕೊAಡರು.
ಆರ್ಯವೈಶ್ಯ ಸಮುದಾಯದವರು ಹೆಚ್ಚಾಗಿ ಆಹಾರ ಉತ್ಪನ್ನಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇವರೆಲ್ಲಾ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಮೂರು ಗಾಲಿ ಹಾಗೂ ನಾಲ್ಕು ಗಾಲಿಗಳ ಫುಡ್ ಟ್ರಕ್ ನೀಡಲಾಗುವುದು.  ಪ್ರತಿ ಟ್ರಕ್ಕಿಗೆ 5 ಲಕ್ಷ ರೂ ಗಳಾಗಲಿದೆ. ಟ್ರಕ್ ತಯಾರಿಕರ ಬಳಿಯು ಈ ಬಗ್ಗೆ ಚರ್ಚಿಸಲಾಗಿದೆ.  100 ಟ್ರಕ್‌ಗಳನ್ನು ನೀಡಲು 5 ಕೋಟಿ ರೂಗಳ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿರುವುದಾಗಿ ಅವರು ಹೇಳಿದರು.
ನಿಗಮದ ವಿವಿಧ ಯೋಜನೆ ಸಾಲ ಸೌಲಭ್ಯದಡಿ ಸಾಂಕೇತಿಕವಾಗಿ ರಾಜ್ಯಾದ್ಯಂತ 1150 ಫಲಾನುಭವಿಗಳಲ್ಲಿ ಕೊಪ್ಪಳ ಜಿಲ್ಲೆಯಿಂದ 97 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜೀವನ್ ಪ್ರಸಾದ್ ಸಮುದಾಯದ ಹಿರಿಯ ಮುಂಖಡರುಗಳಾದ ಶ್ರೀನಿವಾಸ ಗುಪ್ತ, ರಾಘವೇಂದ್ರ ಪಾನಗಂಟಿ, ಶ್ರೀರಂಗ ದರೋಜಿ, ಎಸ್.ವಿರೇಶ್ ಶೆಟ್ಟಿ, ದೇವೇಂದ್ರಪ್ಪ ಪಿ., ಸಂತೋಷ ಕೆಲೋಚಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Please follow and like us:
error
error: Content is protected !!