ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ: ವಿಕಾಸ್ ಕಿಶೋರ್ ಸುರಳ್ಕರ್

ಸಮರ್ಥನಂ ಸಂಸ್ಥೆಯಿAದ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಸುರಕ್ಷತಾ ಕಿಟ್ ವಿತರಣೆ ಕಾರ್ಯಕ್ರಮ

ಕೊಪ್ಪಳ, : ಕೋವಿಡ್-19 ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದ್ದು, ಅದೇ ರೀತಿ ಪ್ರಸ್ತುತ ಕೋವಿಡ್-19 ವ್ಯಾಕ್ಸಿನ್ ಪಡೆಯುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಅವರು ಮಾಡಬೇಕು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಮಾ. 24)ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ಸುರಕ್ಷತಾ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಕಿಟ್ ವಿತರಿಸಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲೆಯಲ್ಲಿ 60 ವರ್ಷದವರಿಗೆ ಕೋವಿಡ್ ವ್ಯಾಕ್ಸಿನ್‌ನ್ನು ನಿಯಮಾನುಸಾರ ನೀಡಲಾಗುತ್ತಿದೆ. ಇದರೊಂದಿಗೆ ಇನ್ಮುಂದೆ 40-50 ವಯೋಮಾನದವರಿಗೂ ಲಸಿಕೆಯನ್ನು ನೀಡಲಾಗುತ್ತಿದ್ದು, ಲಿಸಿಕೆ ಹಾಕಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತ ಭವನದಲ್ಲಿ ಹಾಗೂ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರಿಗೂ ಕೂಡಾ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಲಕನಂದಾ ಡಿ. ಮಳಗಿ ಮಾತನಾಡಿ, ಆಶಾ ಕಾರ್ಯಕರ್ತೆಯರು ಬಹಳಷ್ಟು ಶ್ರಮಿಸುತ್ತಿದ್ದು, ಸದಾ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳೊಂದಿಗೆ ಕೈಜೋಡಿಸುತ್ತಿರುವುದಕ್ಕೆ ಹಾಗೂ ಯಶಸ್ವಿಗೊಳಿಸುತ್ತಿರುವುದಕ್ಕೆ ಅಭಿನಂದನೆಗಳು. ಕರ್ತವ್ಯದ ಅವಧಿಯಲ್ಲಿ ಯಾವುದೇ ರೀತಿಯ ಸಹಾಯಕ್ಕಾಗಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬಹುದು. ಅಲ್ಲದೆ ಸುರಕ್ಷತಾ ಸಲಕರಣೆಗಳು ಬೇಕಾದಲ್ಲಿ ನಮ್ಮ ಗಮನಕ್ಕೆ ತರಬೇಕು. ಅವುಗಳನ್ನು ಒದಗಿಸುವ ಕೆಲಸ ಮಾಡಲಾಗುವುದು ಎಂದರು.
ಸಮರ್ಥನಂ ಸಂಸ್ಥೆಯ ವ್ಯವಸ್ಥಾಪಕ ಮೌನೇಶಪ್ಪ ಡಿ. ಮಾತನಾಡಿ, ಜಿಲ್ಲೆಯಲ್ಲಿ 1,343 ಜನ ಆಶಾ ಕಾರ್ಯಕರ್ತೆಯರಿದ್ದು, ಇವರೆಲ್ಲರಿಗೂ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ. ಆಶಾ ಕಾರ್ಯಕರ್ತೆಯರು ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುತ್ತಿದ್ದಾರೆ. ಅವರ ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ. ಹಾಗಾಗಿ ಈ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ಕಿರಣ್‌ಕುಮಾರ್, ಪವಿತ್ರರಾಜ್ ಉಪಸ್ಥಿತರಿದ್ದರು.

Please follow and like us:
error