ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮೊದಲ ಆಗಲಿ : ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್


ಕೊಪ್ಪಳ,  : ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯ ಸರ್ಕಾರಿ, ಖಾಸಗಿ ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಸಿಲಿಂಡರ್‌ಗಳ ಬೇಡಿಕೆ ಹೆಚ್ಚಾಗಿದ್ದು, ಬೇಡಿಕೆಗೆ ತಕ್ಕಂತೆ ಆಕ್ಸಿಜನ್ ಪೂರೈಸುವಂತೆ ಆಕ್ಸಿಜನ್ ಪೂರೈಕೆದಾರರಿಗೆ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲೆಯ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬಾರಾಜು ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಆಕ್ಸಿಜನ್‌ಗೆ ಬೇಡಿಕೆ ಹೆಚ್ಚಿದೆ.  ಇದರಿಂದಾಗಿ ಬೇಡಿಕೆಗೆ ತಕ್ಕಂತೆ ಆಕ್ಸಿಜನ್ ಪೂರೈಕೆ ಮಾಡಲು ಖಾಸಗಿ ಕಂಪನಿಗಳು ಸಹಕರಿಸಬೇಕು.  ಜಿಲ್ಲೆಯ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸುವ ಪೂರೈಕದಾರರು ಬೇರೆ ಜಿಲ್ಲೆಗಳಿಗೆ, ಇನ್ನೊಂದಡೆ ಆಕ್ಸಿಜನ್ ಲಭ್ಯವಾಗುವಂತಿದ್ದರೆ ಅಂತಹ ಜಿಲ್ಲೆಗೆ ಸರಬರಾಜು ಮಾಡುವುದನ್ನು ಸ್ವಲ್ಪ ಕಡಿತಗೊಳಿಸಿ ಕೊಪ್ಪಳ ಜಿಲ್ಲೆಗೆ ಮೊದಲ ಆದ್ಯತೆ ನೀಡಬೇಕು.  ಜೊತೆಗೆ ಸ್ಟೀಲ್ ಇಂಡಸ್ಟಿçಗಳಿಗೆ ಪೂರೈಸುವ ಆಕ್ಸಿಜನ್ ಕಡಿತಗೊಳಿಸಿ, ಇನ್ನೂಳಿದ ಜಿಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಪೂರೈವ ಕೆಲಸವಾಗಬೇಕು ಎಂದರು.
ನಿತ್ಯ ಜಿಲ್ಲಾ ಆಸ್ಪತ್ರೆ ಮತ್ತು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ಸಾಕಷ್ಟು ಪ್ರಮಾಣದಲ್ಲಿ ಸಿಲಿಂಡರ್‌ಗಳ ಪೂರೈಕೆ ಅವಶ್ಯಕತೆ ಇರುವುದರಿಂದ ಆಯಾ ಆಸ್ಪತ್ರೆಗೆ ಸಂಬAಧಪಟ್ಟ ಆಕ್ಸಿಜನ್ ನಿರ್ವಹಣೆದಾರರು ಆಕ್ಸಿಜನ್ ಸಿಲಿಂಡರ್‌ಗಳನ್ನು ಬೇಡಿಕೆ ಅನುಗುಣವಾಗಿ ಸರಬಾರಾಜು ಮಾಡಿಸಿಕೊಂಡು ಬಳಸಿಕೊಳ್ಳಬೇಕು ಎಂದರು.
ಆಕ್ಸಿಜನ್ ಪೂರೈಕೆ ಮಾಡುವ ಖಾಸಗಿ ಕಂಪನಿಗಳ ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೂ ಚರ್ಚೆ ಮಾಡಿ ಸಭೆಯಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ನಾರಯಣರೆಡ್ಡಿ ಕನಕರೆಡ್ಡಿ, ತಹಶಿಲ್ದಾರ ಜೆ.ಬಿ ಮಜ್ಜಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು. ಟಿ, ಕಿಮ್ಸ್ ನಿರ್ದೇಶಕರು ಸೇರಿದಂತೆ ಆಕ್ಸಿಜನ್ ಪೂರೈಸುವ ಖಾಸಗಿ ಕಂಪನಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error