ಎಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆ ಖಚಿತ : ಸಿದ್ದರಾಮಯ್ಯ

ಮೈಸೂರು : ಎಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಖಚಿತ ಮಾಹಿತಿ ಇದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ದೊರೆತಿರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಎಪ್ರಿಲ್ ನಂತರ ಬದಲಾಗಲಿದ್ದಾರೆ. ನನಗೆ ಆರ್.ಎಸ್.ಎಸ್ ಮೂಲಗಳಿಂದ ಮಾಹಿತಿ ಬಂದಿದೆ ಎಂದು ಹೇಳಿದರು‌.

ಕೇಂದ್ರ ಗೃಹ ಸಚಿವ ಅಮಿತ್ ಶಾ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ನೇನು ಬದಲಾಗುತ್ತಾರೆ ಅನ್ನೋಕಾಗುತ್ತ, ಹೈಕಮಾಂಡ್ ಬದಲಾಗುತ್ತಾರೆ ಎಂದರೆ, ಕೆಲಸ ಮಾಡಲು ಸಾಧ್ಯನಾ ? ಹಾಗಾಗಿ ಮುಂದುವರಿಯುತ್ತಾರೆ ಎಂದಿದ್ದಾರೆ. ನನಗೆ ಆರ್.ಎಸ್.ಎಸ್ ಮೂಲಗಳಿಂದ ಮಾಹಿತಿ ಇದ್ದು, ಯಡಿಯೂರಪ್ಪ ಖಂಡಿತ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದರು.

ಇನ್ನು ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ದರಾಮಯ್ಯ, ಈ ವಯಸ್ಸಿನಲ್ಲಿ ಯಡಿಯೂರಪ್ಪ ಅದೇನೇನು ಮಾಡಿದ್ದಾರೋ ಗೊತ್ತಿಲ್ಲ, ಒಟ್ಟಿನಲ್ಲಿ ಸಿಡಿ ಯಲ್ಲಿ ಏನಿದೆ ಎಂದು ತನಿಖೆಯಾಗಿ ಬಹಿರಂಗ ಪಡಿಸಬೇಕು ಎಂದು ಹೇಳಿದರು.

Please follow and like us:
error