ಎಲ್ಲರೂ ಕಡ್ಡಾಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಿ; ಕೋವಿಡ್-19ನ್ನು ತಡೆಗಟ್ಟಿ
ಕೊಪ್ಪಳ, : ಕೋವಿಡ್-19 ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಹಾಗೂ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.
ರಾಜ್ಯಮಟ್ಟದ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಎ.ಎನ್. ವೇಣುಗೋಪಾಲ ಅವರು ಇತ್ತೀಚೆಗೆ (ಏ. 26 & 27) ತೆಗೆದುಕೊಂಡ ವಿಡಿಯೋ ಕಾನ್ಫ್ರೆನ್ಸ್ನಲ್ಲಿ ದೇಶಾದ್ಯಂತ ಕೋವಿಡ್-19 ಎರಡನೇ ಅಲೆಯ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಪಡೆಯುವಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮತ್ತು ಮುಖಗವಸು(ಮಾಸ್ಕ್)ನ್ನು ಧರಿಸಲು ಪರಿಣಾಮಕಾರಿಯಾಗಿ ಸುರಕ್ಷಾ ಕ್ರಮಗಳನ್ನು ಪಾಲನೆ ಮಾಡಲು ನಿರ್ದೇಶಿಸಿದ್ದಾರೆ.
ಆದ್ದರಿಂದ ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಮತ್ತು ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ಈ ಅಪಾಯಕಾರಿ ಸೋಂಕು ಹೆಚ್ಚಳವಾಗದಂತೆ ತಡೆಯುವ ನಿಟ್ಟಿನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಲ್.ವಿಜಯಲಕ್ಷಿö್ಮÃ ದೇವಿ ಅವರು ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು, ಜೆ.ಎಮ್.ಎಫ್.ಸಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರಿ ಸದಸ್ಯ ಕಾರ್ಯದರ್ಶಿ ಹರೀಶ ಕುಮಾರ ಎಮ್. ಅವರು ಜಂಟಿ  ತಿಳಿಸಿದ್ದಾರೆ.

Please follow and like us:
error