ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ : ಹೆಚ್. ವಿಶ್ವನಾಥರೆಡ್ಡಿ


ಕೊಪ್ಪಳ ಫೆ. : ಕೊಪ್ಪಳ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ವಿಶೇಷ ತರಬೇತಿ ನೀಡಿ ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್. ವಿಶ್ವನಾಥ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾದ ಜಿ.ಪಂ. ಸಾಮಾನ್ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕಳೆದಭಾರಿ ಉತ್ತಮ ಫಲಿತಾಂಶವನ್ನು ನಮಗೆ ನೀಡಿದ್ದು ಅದೇ ರೀತಿ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿಶೇಷವಾದ ೧೫ ದಿನಗಳ ತರಬೇತಿ ನೀಡಿ ನಮ್ಮ ಜಿಲ್ಲೆಯಲ್ಲಿ ಫಲಿತಾಂಶ ಪ್ರಗತಿ ಹೊಂದಲು ಮುಂದಾಗಿ, ಮಕ್ಕಳ ದೈನಂಧಿನ ವಿದ್ಯಾಭ್ಯಾಸದ ಜೊತೆಗೆ ಕಳೆದ ಬಾರಿಯ ಪ್ರಶ್ನೆ ಪತ್ರಿಕೆಗಳನ್ನು ಪರೀಶಿಲಿಸಿ ನೂರಿತ ಶಿಕ್ಷಕರಿಂದ ವಿಚಾರ ಸಂರ್ಕಿಣ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಆಯೋಜಿಸಿ, ಶಾಲೆಯ ಅವಧಿ ಮುಗಿದ ನಂತರ ವಿಶೇಷವಾದ ತರಬೇತಿಯನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ತಯಾರಿ ಮಾಡಿದಾಗ ಮಾತ್ರ ಈ ಭಾರಿಯು ಉತ್ತಮ ಸ್ಥಾನ ಪಡೆಯುವಲ್ಲಿ ಶಿಕ್ಷಕರು ಸಹ ಕೈಜೊಡಿಸಿಬೇಕು ಎಂದು ಹೇಳಿದರು
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಿ ನೀರಿನ ಸಮಸ್ಯೆಯಿದ್ದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸಬೇಕು. ಕುಡಿಯುವ ನೀರಿನ ಸರಬರಾಜು ಯೋಜನೆಯ ಮೋಟಾರಗಳ ದುರಸ್ಥಿ ಸರಿಪಡಿಸಿಕೊಂಡು ನೀರನ್ನು ಒದಗಿಸಿ, ಈಗಾಗಲೇ ಕೆಲಕಡೆ ಗೋಶಾಲೆ ಆರಂಭಿಸಲಾಗಿದೆ. ಪ್ರಾರಂಭಿಸಿದ ಗೋವು ಶಾಲೆಗಳಲ್ಲಿನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಯಾಗದ ರೀತಿಯಲ್ಲಿ ಸಮಸ್ಯೆಯನ್ನು ಬಗೆಹರಿಸಿ ಹಾಗೂ ದಿನದಿಂದ ದಿನಕ್ಕೆ ವಿಪರೀತ ಬರ ಉಂಟಾಗುತ್ತಿದ್ದರಿಂದ ಜಿಲ್ಲೆಯಲ್ಲಿನ ಸಮಸ್ಯೆ ಕುರಿತಂತೆ ಸಾರ್ವಜನಕ ಅಹವಾಲುಗಳನ್ನು ಸ್ವೀಕರಿಸಿ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗ್ಗೆ ಸ್ಪಂಧನೆಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಶು ವ್ಯದ್ಯಕೀಯ ಇಲಾಖೆಯಲ್ಲಿನ ದನಕರುಗಳಿಗೆ ಕೈಕಾಲು ನೋವು, ಬಾಯಿ ನೋವು ಲಸಿಕೆಯನ್ನು ಜಿಲ್ಲೆಯಲ್ಲಿನ ಪಶು ವೈದ್ಯಕೀಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಲಸಿಕೆಯನ್ನು ದನ-ಕರುಗಳಿಗೆ ನೀಡಿ ಗೋವುಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪಶುಸಂಗೋಪನೆಯ ಇಲಾಖೆಯಲ್ಲಿ ಬರುವ ಹೊಸ ಹೊಸ ಯೋಜನೆಗಳನ್ನು ಜನರಿಗೆ ಮಾಹಿತಿ ನೀಡಿ, ಇಲಾಖೆಯಿಂದ ಜನರಿಗೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಮಾಡಬೇಕು. ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಪೈಪ್‌ಲೈನ್‌ಗಳ ದುರಸ್ಥಿಯನ್ನು ಪರಿಶೀಲನೆ ಮಾಡಿ ಸಂಬಂಧಿಸಿದ ನೀರು ಸರಬರಾಜು ಬಳಕೆದಾರರ ಸಂಘಗಳಲ್ಲಿನ ಸಮಸ್ಯೆಗಳನ್ನು ಚರ್ಚಿಸಿ, ಸಾಮಾಜಿಕ ಅರಣ್ಯ ಇಲಾಖೆ ನರೇಗಾ ಅಡಿಯಲ್ಲಿ ಶಾಲೆಗಳಲ್ಲಿ ಸಸಿ ನೆಡುವ ಕಾರ್ಯಗಳನ್ನು ಮಾಡಿ ಗ್ರಾಮೀಣ ವಸತಿ ಯೋಜನೆಯಲ್ಲಿ ಮಂಜೂರಾದ ಮನೆಗಳ ಬಾಕಿ ಮೊತ್ತವನ್ನು ಫಲಾನುಭವಿಗಳಿಗೆ ಪಾವತಿಸಬೇಕೆಂದು ತಿಳಿಸಿದರು. ಅಂಬೇಡ್ಕರ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ವಿವಿಧ ಯೋಜನೆಗಳ ಆಯ್ಕೆ ಪಟ್ಟಿಯನ್ನು ಆಯಾ ಭಾಗದ ಶಾಸಕರು ಫಲಾನುಭವಿಗಳ ಪಟ್ಟಿಯನ್ನು ನೀಡಿದ್ದು ಶೀಘ್ರದಲ್ಲಿಯೇ ಅರ್ಹ ಫಲಾನುಭವಿಗಳಿಗೆ ತಿಳಿಸಲಾಗುವುದು. ಅಲ್ಲದೇ ಕೊಪ್ಪಳ ತೋಟಗಾರಿಕೆ ಇಲಾಖೆಯ ವತಿಯಿಂದ ಫೆ ೧೬ ರಿಂದ ೧೮ ರವಗೆ ದ್ರಾಕ್ಷಿ ಮತ್ತು ದಾಳಿಂಬೆ ಮೇಳವನ್ನು ಆಯೋಜಿಸಿದ್ದು ಇದರ ಸದುಪಯೋಗವನ್ನು ಜಿಲ್ಲೆಯ ಜನರ ಪಡೆದುಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರಗತಿ ವರದಿಗಳನ್ನು ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಂಡೂರು ಹನುಮಂತಗೌಡ ಪಾಟೀಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಉಪಕಾರ್ಯದರ್ಶಿ ಎನ್.ಕೆ. ತೊರವಿ, ಯೋಜನಾ ನಿರ್ದೇಶಕ ರವಿ ಬಿಸರಳ್ಳಿ, ಜಂಟಿ ಕೃಷಿ ನಿರ್ದೇಶಕಿ ಶಬಾನ ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಉಮಾದೇವಿ ಸೊನ್ನದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error