ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ


ಕೊಪ್ಪಳ ಫೆ. ೧೧: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ.ಲಿ. ವತಿಯಿಂದ ಐಟಿಐ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಕುಕನೂರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಫೆ. ೧೫ ರಂದು ಬೆಳಗ್ಗೆ ೧೦ ಗಂಟೆಗೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಜ್ ಪ್ರೈ.ಲಿ. ಬೇವಿನಹಳ್ಳಿ ಇವರ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ಕೂಕನೂರು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗುದ್ನೆಪ್ಪನ ಮಠದಲ್ಲಿ ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಶಿಶಿಕ್ಷು (ಅಪ್ರೆಂಟಿಸ್‌ಶಿಪ್) ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ. ೧೮ ರಿಂದ ೨೪ ವರ್ಷದ ವಯೋಮಿತಿಯ ಅಭ್ಯರ್ಥಿಗಳು ಐಟಿಐ, ಎನ್‌ಸಿವಿಟಿ ಅಡಿಯಲ್ಲಿ ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್ ಅಥವಾ ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ೧೦ನೇ ತರಗತಿಯ ಮತ್ತು ಐಟಿಐ ಪಾಸಾದ ಮಾರ್ಕ್ಸ್ ಕಾರ್ಡ್ ಮತ್ತು ಎನ್‌ಸಿವಿಟಿ ಪ್ರಮಾಣ ಪತ್ರದೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳಬೇಕು. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಆಗಮಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: ೯೪೪೯೫೧೭೪೨೬/೯೯೬೪೨೪೭೦೯೮ ಗೆ ಸಂಪರ್ಕಿಸಬಹುದು .

Please follow and like us:
error