ಕನಕಗಿರಿ ಹಾಗೂ ಕಾರಟಗಿ ಬ್ಲಾಕ್ ಕಾಂಗ್ರೆಸ್ ನಿಂದ ”ಮನೆ ಮನೆಗೆ ಕಾಂಗ್ರೆಸ್”

ಶಾಸಕ ಶಿವರಾಜ್ ಎಸ್. ತಂಗಡಗಿಯವರ ನೇತ್ರತ್ವದಲ್ಲಿ ಇಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಕನಕಗಿರಿ ಹಾಗೂ ಕಾರಟಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ”ಮನೆ ಮನೆಗೆ ಕಾಂಗ್ರೆಸ್” ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ನೇತ್ರತ್ವ ವಹಿಸಿ ಮಾತನಾಡಿದ ಶಿವರಾಜ್ ಎಸ್. ತಂಗಡಗಿಯವರು ಗೌರವಾನ್ವಿತ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತ್ರತ್ವ ಕಾಂಗ್ರೆಸ್ ಸಾಧನೆಗಳ ಕುರಿತು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷವು ರೈತ ಪರ, ಬಡವರ ಪರ, ದೀನ-ದಲಿತರ ಪರವಾಗಿದ್ದು, ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾದದು ಎಂದರು. ಪ್ರಧಾನಿ ಮೋದಿ ನೇತ್ರತ್ವದ ಬಿಜೆಪಿ ಸರ್ಕಾರವು ಕೇವಲ ಶ್ರೀಮಂತರ ಪರವಾಗಿ ಇರುವಂತಹ ಸರ್ಕಾರವಾಗಿದ್ದು, ಇವರಿಗೆ ಭಾರತ ದೇಶದ ಬೆನ್ನೆಲುಬಾದ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದರು. ಸಿದ್ದರಾಮಯ್ಯನವರು ರೈತರ ಸಾಲ ಮನ್ನಾ ಮಾಡಿದ್ದು, ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ವತಿಯಿಂದಲೂ ಸಹ ಸಾಲ ಮನ್ನಾ ಮಾಡಿಸಲಿ ಎಂದರು. ಚುನಾವಣಾ ಪೂರ್ವದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದಂತ ಭರವಸೆಗಳಲ್ಲಿ ಶೇ.95%ರಷ್ಟು ಭರವಸೆಗಳನ್ನು ಪೂರ್ಣಗೊಳಿಸಿದ್ದು, ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದೆ ಎಂದರು. ಕಾರಟಗಿ ಹಾಗೂ ಕನಕಗಿರಿ ತಾಲೂಕು ರಚನೆಗೆ ಸಂಬಂಧಿಸಿದಂತೆ ಬಿಜೆಪಿಯವರು ನನ್ನ ಕುರಿತು ಇಲ್ಲದ ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಯಾರು ಗಮನ ಕೊಡುವ ಅಗತ್ಯವಿಲ್ಲ ಎಂದರು. ಕನಕಗಿರಿ ತಾಲೂಕು ರಚನೆ ಕುರಿತು ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದು, ಆ ಎಲ್ಲಾ ಗೊಂದಲಗಳನ್ನು ನಿವಾರಣೆ ಮಾಡಿ ಕನಕಗಿರಿ ಹಾಗೂ ಕಾರಟಗಿಯನ್ನು ತಾಲೂಕಗಳನ್ನಾಗಿ ರಚನೆ ಮಾಡಿ, ಅಭಿವೃದ್ದಿ ಕೆಲಸಗಳನ್ನು ಮುಂದುವರೆಸಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಬಸವರಾಜ ಪಾಟೀಲ್ ಇಟಗಿ, ಕನಕಗಿರಿ ಹಾಗೂ ಕಾರಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಕನಕಗಿರಿ ಯುವ ಕಾಂಗ್ರೆಸ್ ಸಮಿತಿ, ಕಾರಟಗಿ ನಗರ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಸೇರಿದಂತೆ ಜಿ.ಪಂ. ಸದಸ್ಯರು, ತಾ.ಪಂ. ಸದಸ್ಯರು, ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಎಪಿಎಂಸಿಯ ,ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಮತ್ತು ಪಿ.ಎಲ್.ಡಿ. ಬ್ಯಾಂಕಿನ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Please follow and like us:
error