ಕನ್ನಡದಲ್ಲಿ ಸರಣಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

: ಕರಾವಳಿ ಪ್ರದೇಶಗಳ ಅಭಿವೃದ್ಧಿ ಮತ್ತು ಶ್ರಮಿಕ ಮೀನುಗಾರರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಕನ್ನಡದಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರಾವಳಿ ಪ್ರದೇಶಗಳ ಅಭಿವೃದ್ಧಿ ಮತ್ತು ಶ್ರಮಿಕ ಮೀನುಗಾರರ ಕಲ್ಯಾಣ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ. ನೀಲಿ ಆರ್ಥಿಕತೆಯ ಪರಿವರ್ತನೆ, ಕರಾವಳಿ ಮೂಲಸೌಕರ್ಯ ಸುಧಾರಣೆ, ಕಡಲ ಪರಿಸರ ವ್ಯವಸ್ಥೆಯ ರಕ್ಷಣೆಗಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ, ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಈ ಪೈಪ್‍ಲೈನ್ ಯೋಜನೆ ನಮ್ಮ ನಾಗರಿಕರ ಜೀವನವನ್ನು ಮತ್ತಷ್ಟು ಸುಗಮಗೊಳಿಸುತ್ತದೆ ಎಂದು ತಿಳಿಸಿರುವ ಅವರು, ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ತಾಂತ್ರಿಕತೆಯ ಅದ್ಭುತ, ಇದೊಂದು ಭವಿಷ್ಯದ ಯೋಜನೆಯಾಗಿದ್ದು, ಭಾರತದ ಅಭಿವೃದ್ಧಿಯ ಚಾಲನಾ ಶಕ್ತಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

Please follow and like us:
error