ಕನ್ನಡ ಪುಸ್ತಕ ಪ್ರಾಧಿಕಾರ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ


ಕೊಪ್ಪಳ,  : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019ನೇ ಸಾಲಿಗೆ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೇ ಪ್ರಸ್ತುತ ಸಲ್ಲಿಸಲ್ಪಡುವತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ 1/8 ಡಮ್ಮಿ ಅಳತೆಯಲ್ಲಿ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬAಧಿಸಿದAತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬAಧಿಸಿದAತೆ ಹಾಗೂ ರಾಷ್ಟಿçÃಯ ನಾಯಕರ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟಿçÃಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು, ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಅರ್ಜಿಗಳನ್ನು ಏಪ್ರಿಲ್ 15 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ  ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಅವರಿಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ದೂ.ಸಂ: 080-22484516, 2207704 ಇಲ್ಲಿಗೆ ಸಂಪರ್ಕಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್  ತಿಳಿಸಿದ್ದಾರೆ

Please follow and like us:
error

Related posts