ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವಿಧ ದತ್ತಿ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ


ಕೊಪ್ಪಳ  : ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ 2019 ರಲ್ಲಿ ಪ್ರಕಟವಾದ ಪುಸ್ತಕಗಳನ್ನು ಕಳುಹಿಸುವಂತೆ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ತಿಳಿಸಿದ್ದಾರೆ. ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರರ‍್ಸ್ ದತ್ತಿ, ವಿ.ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ, ಭಾರತಿ ಮೋಹನಕೋಟಿ ದತ್ತಿ, ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ.ಮದನಕೇಸರಿ ಜೈನ ದತ್ತಿ, ವಸುದೇವ ಭೂಪಾಲಂ ದತ್ತಿ, ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿ, ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿನೆನಪಿನ ದತ್ತಿ (ಎಲ್.ಬಸವರಾಜ್ ದತ್ತಿ) ಸೇರಿದಂತೆ ಒಟ್ಟು 47 ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
2019 ರಲ್ಲಿ ಪ್ರಕಟವಾದ ಪುಸ್ತಕಗಳನ್ನು ಜುಲೈ.31 ರ ಒಳಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು-560018 ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ವೆಬ್‌ಸೈಟ್ ತಿತಿತಿ.ಞಚಿsಚಿಠಿಚಿ.iಟಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560018, ದೂ.ಸಂ.080-26612991, 26623584 ಸಂಖ್ಯೆಗಳಿಗೆ ಸಂಪರ್ಕಿಸಬಹುದು

Please follow and like us:
error

Related posts