fbpx

ಬೆಂಗಳೂರು : ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ  ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಈ ಮೊದಲು ಟ್ವೀಟ್ ಮಾಡಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಹೇಳಿದ್ದರು.

Please follow and like us:
error
error: Content is protected !!