ಕರ್ನಾಟಕದಲ್ಲಿ ಒಂದೇ ದಿನ 130 ಮಂದಿಗೆ ಕೊರೋನ ಸೋಂಕು ದೃಢ: ಒಟ್ಟು ಸಂಖ್ಯೆ 2,089ಕ್ಕೆ ಏರಿಕೆ

ಚಿಕ್ಕಬಳ್ಳಾಪುರ 27, ಯಾದಗಿರಿ 24, ಉಡುಪಿಯಲ್ಲಿ 23 ಪ್ರಕರಣಗಳು ಪಾಸಿಟಿವ್

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 130 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆವರೆಗೆ 130 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಈ ಪೈಕಿ ಚಿಕ್ಕಬಳ್ಳಾಪುರದಲ್ಲಿ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಬೀದರ್ 6, ಕಲಬುರಗಿ 6, , ದಾವಣಗೆರೆ 4, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರಿನಲ್ಲಿ ತಲಾ 2, ದಕ್ಷಿಣ ಕನ್ನಡ, ಕೊಡಗು, ಧಾರವಾಡ, ವಿಜಯಪುರ ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ ಎಂದು ವರದಿಯಲ್ಲಿ ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 2,089 ಕೊರೋನ ಸೋಂಕಿತರ ಪೈಕಿ 654 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 46 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 42 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1391 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

Please follow and like us:
error