fbpx

ಕರ್ನಾಟಕದ ಜನತೆಗೆ ಉಚಿತವಾಗಿ ಕೊರೊನಾ ಲಸಿಕೆಯನ್ನು ಕೊಡಿಸುವ ಧಮ್ ಇದೆಯಾ ? ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಿದ್ದರಾಮಯ್ಯ ಸವಾಲು

KannadaNET NEWS ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ನಳೀನ್ ಕಟೀಲ್ ಅವರೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು

ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳೀನ್ ಕಟೀಲ್ ಅವರೇ? ಎಂದು ವ್ಯಂಗ್ಯವಾಡಿದ್ದಾರೆ.

Please follow and like us:
error
error: Content is protected !!