ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಮತೀಯ ಅಲ್ಪಸಂಖ್ಯಾತರದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಫಾರ್ಸಿಗಳು ಮತ್ತು ಆಂಗ್ಲೋ ಇಂಡಿಯನ್ ಸಮುದಾಯದವರಿಂದ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರುವ, ಗ್ರಾಮೀಣ ಪ್ರದೇಶದವರಿಗೆ 81 ಸಾವಿರ, ನಗರ ಪ್ರದೇಶದವರಿಗೆ ರೂ.1,03,000 ವಾರ್ಷಿಕ ವರಮಾನದೊಳಗಿರುವ, ಹೊಸ ಯೋಜನೆಗಳಿಗೆ 18-45 ವಯೋಮಿತಿಯುಳ್ಳ, ಮೈಕ್ರೋ ವೈಯಕ್ತಿಕ ಸಾಲ ಯೋಜನೆಗೆ 25-55 ವಯೋಮಿತಿಯುಳ್ಳ ಆಸಕ್ತರು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಶ್ರಮಶಕ್ತಿ ಸಾಲ ಯೋಜನೆ, ಮೈಕ್ರೋ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಹೊಸ ಯೋಜನೆಗಳಾದ ಪಶು ಸಂಗೋಪನೆ, ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಗೆ ಸಹಾಯಧನ, ರೈತರ ಕಲ್ಯಾಣ ಯೋಜನೆ(ಕೃಷಿ ಯಂತ್ರೋಪಕರಣ), ಆಟೋಮೊಬೈಲ್ ಸರ್ವೀಸ್, ವೃತ್ತಿ ಪ್ರೋತ್ಸಾಹ ಯೋಜನೆ/ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಲೋನ್ ವೈಯಕ್ತಿಕ, ಗೃಹ ನಿರ್ಮಾಣ ಮಾರ್ಜಿನ್ ಹಣ ಸಾಲದ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.
ನಿಗಮದ ಅಂತರ್ಜಾಲದಲ್ಲಿ ಆನ್‌ಲೈನ್ ಮೂಲಕ ಎಲ್ಲಾ ಯೋಜನೆಗಳಿಗೆ kmdc.kar.nic.in/loan/login.aspx     ಮೈಕ್ರೋ ವೈಯಕ್ತಿಕ ಸಾಲಕ್ಕಾಗಿ  kmdcmicro.karnataka.gov.in  ರಲ್ಲಿ ಡಿಸೆಂಬರ್.10 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯ ಪ್ರಿಂಟೌಟ್ ಪಡೆದು ಅಗತ್ಯ ದಾಖಲಾತಿಗಳಾದ ಆಧಾರ್ ಕಾರ್ಡ್, ಓಟರ್ ಐಡಿ, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳು, ಯೋಜನೆಗೆ ಸಂಬAಧಿಸಿದ ದಾಖಲಾತಿಗಳನ್ನು ಲಗತ್ತಿಸಿ ಡಿಸೆಂಬರ್.21 ರೊಳಗೆ ಖುದ್ದಾಗಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಂಗವಿಕಲರು, ವಿಧವೆಯರು ಹಾಗೂ ಮಾಜಿ ಸೈನಿಕರು ಅರ್ಜಿಯಲ್ಲಿ ಕಡ್ಡಾಯವಾಗಿ ಪ್ರಮಾಣ ಪತ್ರ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಪ್ಪಳ ದೂ.ಸಂ. 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು  ತಿಳಿಸಿದ್ದಾರೆ.

Please follow and like us:
error