ಕರ್ನಾಟಕ ಬಂದ್ ಗೆ SFI ಸಂಪೂರ್ಣ ಬೆಂಬಲ

ಗಂಗಾವತಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ ಮತ್ತು ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಸೆಪ್ಟೆಂಬರ್‌ 28 ರಂದು 30 ಕ್ಕೂ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ SFI ಕರ್ನಾಟಕ ರಾಜ್ಯ ಸಮಿತಿಯು ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು Sfi ರಾಜ್ಯ  ಅಧ್ಯಕ್ಷರಾದ ಅಮರೇಶ ಕಡಗದ ತಿಳಿಸಿದ್ದಾರೆ.
ರಾಜ್ಯದ ತನ್ನೆಲ್ಲಾ ಘಟಕಗಳಿಗೆ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲು ಈಗಾಗಲೇ ಕರೆ ನೀಡಿದೆ‌,ಮತ್ತು ಈ ಜನ ವಿರೋಧಿ ನೀತಿಗಳ ಜಾರಿಯ ವಿರುದ್ದ ಹೋರಾಟವೊಂದೆ ಪರಿಹಾರ ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿ, ಯುವಜನ, ರೈತ, ಕಾರ್ಮಿಕರು ಐಕ್ಯರಾಗಿ ಪ್ರತಿಭಟನೆ ಮಾಡುವ ಮೂಲಕ ನಮ್ಮ ವಿರೋಧವನ್ನು ವ್ಯಕ್ತಪಡಿಸಿ ಈ ಮೂಲಕ ಜನದ್ರೋಹಿ ಕಾರ್ಪೊರೇಟ್ ಪರ ಇರುವ ಸರ್ಕಾರಗಳಿಗೆ ಪಾಠ ಕಲಿಸಬೇಕಿದೆ. ವಿದ್ಯಾರ್ಥಿ ವಿರೋಧಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ NEP -2020ನ್ನು ಜಾರಿ ಮಾಡಲು BJP ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಈಗ ಮುಂದಾಗಿವೆ. ಇದನ್ನು ವಿರೋಧಿಸುವುದರ ಜೊತೆಗೆ ವಿದ್ಯಾರ್ಥಿ ಸಮುದಾಯ ರೈತ, ಕಾರ್ಮಿಕ ಪರ ನಿಲ್ಲಬೇಕಿದೆ ಇದು ದೇಶ ಮತ್ತು ಜನತೆಯ ಬದುಕನ್ನು ಉಳಿಸುವ ಹೋರಾಟ ಈ ಬಂದ್ ನಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು SFI ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಕೆ, ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಂಟಿ ಕಾರ್ಯದರ್ಶಿ ಭೀಮನಗೌಡ ಗಂಗಾವತಿ ತಾಲೂಕ ಅಧ್ಯಕ್ಷ ಗ್ಯಾನೇಶ ಕಡಗದ, ಕಾರ್ಯದರ್ಶಿ ಶಿವಕುಮಾರ ಈಚನಾಳ ಸೇರಿ ಇತರರು  ಜಂಟಿಯಾಗಿ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.
Please follow and like us:
error