ಕನ್ನಡನೆಟ್ ನ್ಯೂಸ್ : ದಿನಾಂಕ : 22.04.2021 ರಿಂದ 30.04.2021 ರವರೆಗೆ ನಡೆಯಬೇಕಾಗಿದ್ದ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ 385 ಆಯೋಗವು ದಿನಾಂಕ : 22.04.2021 ರಿಂದ 30.04.2021 ರವರೆಗೆ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಿತ್ತು . ಸದರಿ ಪರೀಕ್ಷೆಗಳಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅಭ್ಯರ್ಥಿಗಳು ದಿನಾಂಕ : 22.04.2021 ರಿಂದ 28.04.2021 ರವರೆಗೆ ಬೆಂಗಳೂರು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿರುತ್ತದೆ ಹಾಗೂ ದಿನಾಂಕ : 29.04.2021 ಮತ್ತು 30.04.2021 ರಂದು ವಿಭಾಗೀಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಾಗಬೇಕಿರುತ್ತದೆ . ಕೋವಿಡ್ -19 ಸಾಂಕ್ರಾಮಿಕ ರೋಗಾಣು ಹರಡುವಿಕೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವುದರಿಂದ ಹಾಗೂ ಸರ್ಕಾರದ ಆದೇಶ ಸಂಖ್ಯೆ : ಆರ್‌ಡಿ 158 ಟಿಎನ್ಆರ್ 2020 , ದಿನಾಂಕ : 20.04.2021 ರ ಮಾರ್ಗಸೂಚಿ ಅನ್ವಯ ದಿನಾಂಕ : 21.04,2021 ರಿಂದ 04.05.2021 ರವರೆಗೆ ರಾತ್ರಿ ಕರ್ಪ್ಯೂ ಹಾಗೂ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಿರುವ ಹಿನ್ನಲೆಯಲ್ಲಿ ದಿನಾಂಕ : 22.04.2021 ರಿಂದ 30.04.2021 ರವರೆಗೆ ನಡೆಯಬೇಕಿದ್ದ ಇಲಾಖಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಿದೆ . ಮುಂದಿನ ಪರೀಕ್ಷಾ ದಿನಾಂಕಗಳನ್ನು ನಂತರದ ದಿನಗಳಲ್ಲಿ ಆಯೋಗದ ಅಂತರ್ಜಾಲದಲ್ಲಿ http://kpsc.kar.nic.in ರಲ್ಲಿ ಪ್ರಕಟಿಸಲಾಗುವುದು ಎಂದು ( ಜಿ , ಸತ್ಯವರ್ತಿ ಕಾರ್ಯದರ್ಶಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error