ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಅವಧಿ ವಿಸ್ತರಣೆ

ಕೊಪ್ಪಳ ನ.  ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2018 ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸ್ಲಲಿಸಲು ಜುಲೈ 10 ನ್ನು ಕೊನೆ ದಿನಾಂಕವಾಗಿ ನಿಗದಿ ಪಡಿಸಲಾಗಿತ್ತು. ಪುಸ್ತಕಗಳನ್ನು ಸಲ್ಲಿಸದೇ ಇರುವವರಿಗಾಗಿ ಮತ್ತೊಮ್ಮೆ ಅವಕಾಶ ಕಲ್ಪಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್. 30 ರವರಗೆ ವಿಸ್ತರಿಸಲಾಗಿದೆ.
ಪುಸ್ತಕಗಳ ರಚನೆಯು ಕಾವ್ಯ (ವಚನಗಳು ಮತ್ತು ಹನಿಗವನಗಳು ಸೇರಿ), ನವಕವಿಗಳ ಪ್ರಥಮ ಸಂಕಲನ (ದೃಢೀಕರಣ ಪತ್ರದೊಂದಿಗೆ), ಕಾವ್ಯ ಹಸ್ತಪ್ರತಿ-30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳುಹಿಸಿ ಕೊಡಬೇಕು. ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ (ಹರಟೆ ಮತ್ತು ವಿನೋದ ಸಾಹಿತ್ಯ ಸೇರಿ), ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ ಅಥವಾ ಆತ್ಮಕಥೆ, ಸಾಹಿತ್ಯ ವಿಮರ್ಶೆ ( ಸಾಹಿತ್ಯ ಚರಿತ್ರೆ, ಸಾಹಿತ್ಯತತ್ವ ಮತ್ತು ಸೌಂದರ್ಯ ಮೀಮಾಂಸೆ ಸೇರಿ), ಗ್ರಂಥ ಸಂಪಾದನೆ (ಪ್ರಾಚೀನ ಕೃತಿಗಳ ಸಂಪಾದನೆ), ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ ( ಭೌತ, ರಸಾಯನ, ಗಣಿತ, ಪ್ರಾಣಿ, ಸಸ್ಯ, ಇಂಜಿನಿಯರಿAಗ್, ವೈದ್ಯ, ಭೂ, ಖಗೋಳ, ಗೃಹ ವಿಜ್ಞಾನ, ಪರಿಸರ), ಮಾನವಿಕ(ಜಾನಪದ, ಇತಿಹಾಸ, ರಾಜಕೀಯ ಶಾಸ್ತç, ಸಮಾಜ ಶಾಸ್ತç, ಮಾನವ ಶಾಸ್ತç, ಮನಃಶಾಸ್ತç, ಭಾಷಾ ಶಾಸ್ತç, ಶಿಕ್ಷಣ, ವಾಣಿಜ್ಯ, ಕಾನೂನು, ಗ್ರಂಥ ಭಂಡಾರ ವಿಜ್ಞಾನ, ಸಮೂಹ ಸಂವಹನ, ಧಾರ್ಮಿಕ, ದಾರ್ಶನಿಕ), ಸಂಶೋಧನೆ(ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಗಳಿಗೆ ಸಂಬAಧಿಸಿದ ಸಂಶೋಧನೆ), ವೈಚಾರಿಕ ಅಥವಾ ಅಂಕಣ ಬರಹ, ಅನುವಾದ -ಸೃಜನ(ಕಾದಂಬರಿ, ಕಾವ್ಯ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ), ಸೃಜನೇತರ(ಶಾಸ್ತç ಸಾಹಿತ್ಯ, ಸಾಹಿತ್ಯ ವಿಮರ್ಶೆ), ಅನುವಾದ-2 ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ ಕೃತಿಯಾಗಿರಬೇಕು, ಲೇಖಕರ ಮುದಲ ಸ್ವತಂತ್ರ ಕೃತಿಗೆ ಬಹುಮಾನ(2018 ರಲ್ಲಿ ಪ್ರಕಟವಾದ ಹೊಸ ಬರಹಗಾರರ ಮೊದಲ ಸ್ವತಂತ್ರ ಕೃತಿಯೆಂದು ಖಾತರಿಪಡಿಸುವ ದೃಢೀಕರಣ ಪತ್ರ ಲಗತ್ತಿಸಬೇಕು) ಈ ಪ್ರಕಾರಗಳಲ್ಲಿ ಪುಸ್ತಕ ರಚನೆಯಾಗಿರಬೇಕು.
ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ  ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018 ರ ಜನವರಿ 1 ರಿಂದ 2018ರ ಡಿಸೆಂಬರ್. 31 ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು.
ನಿರ್ದಿಷ್ಟ ಪಡಿಸಿದ ಅವಧಿಯೊಳಗೆ ಪ್ರಕಟವಾದ ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ ಬೆಂಗಳೂರು-560002 ಇವರಿಗೆ ನೋಂದಾಯಿತ ಅಂಚೆ ಅಥವಾ ಕೊರಿಯರ್ ಮೂಲಕ  ಅಥವಾ ಖುದ್ದಾಗಿ ನವೆಂಬರ್ 30ರೊಳಗಾಗಿ ತಲುಪಿಸಬೇಕು. ಕಳುಹಿಸಲ್ಪಡುವ ಕೃತಿಯು ಯಾವ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು. ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೆ ಅರ್ಜಿ ಸಲ್ಲಿಸಬೇಕಾಗಿಲ್ಲ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪ ಎನ್.  ತಿಳಿಸಿದ್ದಾರೆ

Please follow and like us:
error