ಕರ್ನಾಟಕ ಸಾಹಿತ್ಯ ಅಕಾಡೆಮಿ: ಅಪ್ರಕಟಿತ ಕೃತಿಗಳ ಆಹ್ವಾನ


ಕೊಪ್ಪಳ,: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳ ಪ್ರಕಟಣೆಗಾಗಿ ಆಸಕ್ತ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಲೇಖಕರು ಯಾವುದೇ ವಿಷಯಕ್ಕೆ ಸಂಬAಧಿಸಿದ ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಆತ್ಮಕತೆ, ನಿಘಂಟು, ಈವರೆಗೆ ಬಾರದೇ ಇರುವ ಜ್ಞಾನಶಾಖೆಯ ಬಗ್ಗೆ ಪ್ರಕಟವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತçಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ತಮ್ಮ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಮುದ್ರಣದ ಆಯ್ಕೆಗಾಗಿ ಬಂದ ಕೃತಿಗಳನ್ನು ಸ್ವೀಕರಿಸುವ ಅಥವಾ ನಿರಾಕರಿಸುವ ಹಕ್ಕು ಅಕಾಡೆಮಿಯದ್ದಾಗಿರುತ್ತದೆ. ಕೃತಿಗಳನ್ನು ನವೆಂಬರ್.16 ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‌ಸೈಟ್ www.karnatakasahithyaacademy.org     ಗೆ ಸಂಪರ್ಕಿಸಬಹುದು ಎಂದು ಅಕಾಡೆಮಿ ರಿಜಿಸ್ಟಾçರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error