ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ ‘ಬಿ’ ಫಾರಂ ವಿತರಿಸಿದ ಅಧ್ಯಕ್ಷ ಡಿ.ಕೆ ಶಿವಕುಮಾರ್

 

ಬೆಂಗಳೂರು : ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ನಂತರ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದರು.

ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ್ ಜಾರಕಿಹೊಳಿ, ಮಾಜಿ ಅಧ್ಯಕ್ಷರಾದ ಆರ್.ವಿ ದೇಶಪಾಂಡೆ, ಡಾ.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಮತ್ತಿತರ ನಾಯಕರು ಉಪಸ್ಥಿತರಿದ್ದರು.

Please follow and like us:
error