fbpx

ಕಾಂಗ್ರೆಸ್ ನಾಯಕರ ಸಿದ್ಧೌಷಧದ ಬಗ್ಗೆ ನೆನಪಿಸಿಕೊಂಡ ಹೆಚ್.ಡಿ,ಕುಮಾರಸ್ವಾಮಿ

ಕಾಂಗ್ರೆಸ್ ನಾಯಕರು ಈಗ ಮರಣೋತ್ತರ ಪರೀಕ್ಷೆ ಬಗ್ಗೆ ರಾಗ ಎಳೆಯುತ್ತಿದ್ದಾರೆ. ಆದರೆ ವರದಿಯಲ್ಲಿ ಏನಿದೆ ಎಂಬ ಸತ್ಯಾಂಶವನ್ನು ನಾನು ಹೇಳಿದರೆ ಆ ಭಾಷೆ ನನಗೆ ಅರ್ಥವಾಗಲಿಲ್ಲ ಎಂದು ಜಾರಿಕೊಳ್ಳುವುದು ತರವಲ್ಲ. ಅವರ ಕನಸು-ಕನವರಿಕೆಗಳನ್ನು ಮೈತ್ರಿ ಸರ್ಕಾರ ಹೋದ ನಂತರವೂ ಜಪಿಸುತ್ತಿರುವುದರಿಂದಲೇ ಹಳೆಯದನ್ನು ನೆನಪಿಸಿಕೊಳ್ಳಬೇಕಾಯಿತು. ನಮ್ಮ ಅವರ ದೋಸ್ತಿ ಕಳಚಿದ ನಂತರ ಈ ಬಗ್ಗೆ ನಾನು ಮಾತನಾಡಿರಲಿಲ್ಲ. ಕಾಂಗ್ರೆಸ್ ನಾಯಕರೇ ಪದೇಪದೇ ಮೈತ್ರಿ ಮುಗಿದ ಅಧ್ಯಾಯ ಎಂದು ಈಗ ತುಟಿ ಬಿಚ್ಚುತ್ತಿರುವುದರಿಂದ ನಾನು ಮೌನ ಮುರಿಯಬೇಕಾಯಿತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ರಾಜ್ಯದಲ್ಲಿ 8 ಇಲ್ಲವೆ 10 ಸ್ಥಾನ ಗೆಲ್ಲಬಹುದಿತ್ತು ಎಂದು ಸಿದ್ದರಾಮಯ್ಯ ಅವರು ಇತ್ತೀಚಿಗೆ ‘ಮೆಲುಕು’ ಹಾಕಿದ್ದರಿಂದಲೇ ನಾನು ಸಿದ್ಧೌಷಧದ ಬಗ್ಗೆ ನೆನಪಿಸಿಕೊಳ್ಳಬೇಕಾಯಿತು ಎಂದುಹೇಳಿದ್ಧಾರೆ

Please follow and like us:
error
error: Content is protected !!