ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳು -ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಸೂಚನೆ


ಕೊಪ್ಪಳ  : ಮಕ್ಕಳ ರಕ್ಷಣಾ ನಿರ್ದೇಶನಾಲಯವು ಮಕ್ಕಳ ನ್ಯಾಯ (ಪೋಷಣೆ & ಮಕ್ಕಳ ರಕ್ಷಣೆ) ಕಾಯ್ದೆ 2015ನ್ನು ಅನುಷ್ಠಾನಗೊಳಿಸುತ್ತಿದ್ದು, ಕಾಯ್ದೆಯನುಸಾರ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಪರಾಧಿಗಳು ಎಂದು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳನ್ನು ಸುಧಾರಣಾ ಸಂಸ್ಥೆಗಳು (ಕರೆಕ್ಷನಲ್ ಹೋಮ್ಸ್) ಎಂದು ಕರೆಯುವುದು ತಪ್ಪಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದೆ.
ಆದ್ದರಿಂದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಮಕ್ಕಳನ್ನು ಬಾಲಪರಾಧಿಗಳು ಎಂದು ಸಂಬೋಧಿಸುವ ಬದಲು ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳು ಎಂದೂ, ಸರಕಾರಿ ಬಾಲಕರ/ಬಾಲಕಿಯರ ಬಾಲಮಂದಿರಗಳನ್ನು ಸುಧಾರಣಾ ಸಂಸ್ಥೆಗಳು/ಕರೆಕ್ಷನಲ್ ಹೋಮ್ಸ್ ಎಂದು ಸಂಬೋಧಿಸುವ ಬದಲು ಮಕ್ಕಳ ಪಾಲನಾ ಸಂಸ್ಥೆಗಳು ಎಂದು ಸಂಬೋಧಿಸಬೇಕು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿರ್ದೇಶನಾಲಯವು ತಿಳಿಸಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು   ತಿಳಿಸಿದ್ದಾರೆ.

Please follow and like us:
error