ಕಾರ್ಮಿಕರ ಮಕ್ಕಳಿಗೆ ಲಸಿಕೆ ತಲುಪಿಸಿ : ಎಂ.ಪಿ.ಮಾರುತಿ

ಎರಡನೇ ಸುತ್ತು ಮಾರ್ಚ್.22 ರಿಂದ 26 ರವರೆಗೆ : ಇಂದ್ರಧನುಷ್ ಲಸಿಕಾ ಅಭಿಯಾನ-3.0
ಕಲ್ಲು ಕ್ವಾರಿ, ರಸ್ತೆ, ರೈಲ್ವೇ ಕಾಮಗಾರಿ ಪ್ರದೇಶಗಳಲ್ಲಿ ವಾಸವಿರುವ ಕಾರ್ಮಿಕರ ಮಕ್ಕಳಿಗೆ ಲಸಿಕೆ ತಲುಪಿಸಿ : ಎಂ.ಪಿ.ಮಾರುತಿ
ಕೊಪ್ಪಳ : ಜಿಲ್ಲೆಯ ವಿವಿಧ ಕಡೆಗಳಲ್ಲಿರುವ ಕಲ್ಲು ಕ್ವಾರಿ, ಇಟ್ಟಿಗೆ ಬಟ್ಟಿಗಳಲ್ಲಿ ಹಾಗೂ ರಾಷ್ಟಿçÃಯ ಹೆದ್ದಾರಿ, ರೈಲ್ವೇ ಕಾಮಗಾರಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮಕ್ಕಳಿಗೆ, ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆಯನ್ನು ಹಾಕಲು ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಅವರು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಇಂದ್ರಧನುಷ್ ಲಸಿಕೆ ಅಭಿಯಾನ-3.0 ದ ಎರಡನೇ ಸುತ್ತಿನ ಲಸಿಕೆ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಜನವಸತಿ ಪ್ರದೇಶಗಳಲ್ಲಿ, ಗ್ರಾಮಗಳಲ್ಲಿ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ 2 ವರ್ಷದೊಳಗಿನ ಮಕ್ಕಳಿಗೆ, ಗರ್ಭಿಣಿಯರಿಗೆ ಇಂದ್ರಧನುಷ್ ಲಸಿಕೆಯನ್ನು ನೀಡಲಾಗುತ್ತದೆ. ಆದರೆ ಜಿಲ್ಲೆಗಳ ಗಡಿಯಲ್ಲಿ ಬರುವ ಗ್ರಾಮಗಳಲ್ಲಿ, ಬಸ್ ಸೇರಿದಂತೆ ಇತರೆ ಯಾವುದೇ ಸಂಪರ್ಕ ವ್ಯವಸ್ಥೆ, ಮೂಲಭೂತ ಸೌಕರ್ಯ ಇಲ್ಲದ ಪ್ರದೇಶಗಳಲ್ಲಿ, ರಸ್ತೆ, ರೈಲ್ವೇ ಕಾಮಗಾರಿ, ಕಾರ್ಖಾನೆಗಳಲ್ಲಿ, ಇಟ್ಟಿಗೆ ಬಟ್ಟಿ, ಕಲ್ಲು ಕ್ವಾರಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಮಕ್ಕಳು, ಸ್ಲಂ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಅವರಿಗೆ ಲಸಿಕೆಯನ್ನು ನೀಡಿ. ಅಂತಹ ಪ್ರದೇಶಗಳಿಗೆ ತೆರಳಲು ಬೇಕಾದ ಅಗತ್ಯ ವಾಹನದ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ಹನುಮಸಾಗರ ಮತ್ತು ಇಳಕಲ್ ನಡುವಿನ ಗಡಿ ಪ್ರದೇಶದಲ್ಲಿ, ಹನುಮಸಾಗರ ಹೋಬಳಿಯ ಕಡೂರು, ಕನಕಗಿರಿಯ ಸಿರವಾರ ಗ್ರಾಮಗಳಲ್ಲಿ, ತೋಟದ ಮನೆಗಳಲ್ಲಿ, ದತ್ತು ಪಾಲನಾ ಸಂಸ್ಥೆಗಳಲ್ಲಿ ವಾಸಿಸುವ ಮಕ್ಕಳು ಹಾಗೂ ಈಗಾಗಲೇ ಲಸಿಕೆ ಅಂಗವಾಗಿ ಮಾಡಿದ ಸಮೀಕ್ಷೆಯ ಪಟ್ಟಿಯಲ್ಲಿ ತಪ್ಪಿಹೋದ ಮಕ್ಕಳನ್ನು ಗುರುತಿಸಿ ಅವರಿಗೆ ಲಸಿಕೆಯನ್ನು ನೀಡಬೇಕು. ಒಂದು ವೇಳೆ 2 ವರ್ಷದ ನಂತರದ ಮಕ್ಕಳಲ್ಲಿ ಲಸಿಕೆಯನ್ನು ತಪ್ಪಿಸಿದವರು ಸಿಕ್ಕಲ್ಲಿ ಅಂತಹವರಿಗೂ ಲಸಿಕೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಿ. ವಿವಿಧ ಇಲಾಖೆಗಳ ಸಮನ್ವಯತೆಯಲ್ಲಿ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಲಕನಂದಾ ಡಿ.ಮಳಗಿ ಮಾತನಾಡಿ, ಇಂದ್ರಧನುಷ್ ಲಸಿಕಾ ಅಭಿಯಾನ-3.0 ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಫೆ.22 ರಿಂದ 26 ರವರೆಗೆ ಮೊದಲನೇ ಸುತ್ತಿ ಲಸಿಕೆಯನ್ನು ನೀಡಲಾಗಿದೆ. ಅದರಂತೆ ಮಾರ್ಚ್.22 ರಿಂದ 26 ರವರೆಗೂ ಎರಡನೇ ಸುತ್ತಿನ ಲಸಿಕೆಯನ್ನು ನೀಡಲಾಗುತ್ತದೆ. ಈಗಾಗಲೇ ಗುರುತಿಸಿರುವ ಪ್ರದೇಶಗಳಲ್ಲಿ ಹಾಗೂ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದ ಪ್ರದೇಶಗಳಲ್ಲಿ ನಿಯಮಾನುಸಾರ ಲಸಿಕೆಯನ್ನು ನೀಡಲಾಗುವುದು. ಲಸಿಕೆ ಕಾರ್ಯಕ್ರಮಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರ ಅಗತು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ಎಸ್.ಬಿ.ದಾನರೆಡ್ಡಿ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀದ್ರನಾಥ, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹೇಶ ಎಂ.ಜಿ., ಡಿಎಲ್‌ಒ ಡಾ. ಎಸ್.ಕೆ.ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error