ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು.-ಹೆಚ್ಡಿಕೆ

ಬೆಂಗಳೂರು : ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು. ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Please follow and like us:
error