ಕುರುಬರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಮನವಿ

ಕೊಪ್ಪಳ :  ಎಸ್.ಟಿ. ಮೀಸಲಾತಿಯಲ್ಲಿ ಅಖಂಡ ಕರ್ನಾಟಕದ ಕುರುಬರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ, ಫೆ. ೭ರಂದು ಭಾನುವಾರ ಬೆಂಗಳೂರಿನ ಇಂಟರನ್ಯಾಷನಲ್ ವಸ್ತು ಪ್ರದರ್ಶನ ಮೈಧಾನದಲ್ಲಿ ನಡೆಯುವ ಎಸ್.ಟಿ. ಮೀಸಲಾತಿಗಾಗಿ ಕುರುಬರ ಜಾಗೃತಿ ಸಮಾವೇಶ”ಕ್ಕೆ ಸ್ವಯಂ ಪ್ರೇರಿತವಾಗಿ ಸಮಾಜ ಬಂದುಗಳು ಆಗಮಿಸಬೇಕು ಎಂದು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಹನಮಂತ ಕೌದಿ ಮನವಿ ಮಾಡಿಕೊಂಡಿದ್ದಾರೆ.
ಪ್ರಕಟಣೆಯ ಮೂಲಕ ತಿಳಿಸಿದ ಅವರು, ಕುರುಬ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಾಗೂ ರಾಜಕೀಯವಾಗಿಯೂ ಹಿಂದುಳಿದಿದೆ. ಇಂದಿಗೂ ಸಹ ಅಲೆಮಾರಿ ಜೀವನ ನಡೆಸುತ್ತಿರುವ, ಬುಡಕಟ್ಟು ಸಂಸ್ಕೃತಿಗಳನ್ನು ಆಚರಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮೀಸಲಾತಿಯು ಪ್ರಜೆಗಳ ಹಕ್ಕು. ಭಾರತ ದೇಶದಲ್ಲಿ ಹಲವು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿದ್ದರೂ ಸಹ ಕರ್ನಾಟಕದಲ್ಲಿ ಕುರುಬ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ಭಾರತ ದೇಶದಲ್ಲಿ ಬುಡಕಟ್ಟು ಜನಾಂಗವಾಗಿರುವ ಕುರುಬ ಸಮುದಾಯವು ಬ್ರಿಟಿಷರ ಆಳ್ವಿಕೆಯಲ್ಲೂ ಸಹ ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿ ಪಟ್ಟಿಯಲ್ಲಿದೆ. ಕರ್ನಾಟಕ ರಾಜ್ಯದಲ್ಲಿಯೂ ಸಹ ಜೇನು ಕುರುಬ, ಕಾಡು ಕುರುಬ, ಗೊಂಡ, ರಾಜಗೊಂಡ ಮತ್ತು ಕುರುಬ (ಕೊಡಗು ಜಿಲ್ಲೆ) ಪರಿಶಿಷ್ಟ ಪಂಗಡ ಪಟ್ಟಿಯಲ್ಲಿದೆ. ಈ ಸೌಲಭ್ಯ ಕೆಲವೇ ಜಿಲ್ಲೆಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ದಶಕಗಳಿಂದ ಕುರುಬ ಸಮಾಜಕ್ಕಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒತ್ತಾಯಿಸಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನP ಗುರುಪೀಠದ ಜಗದ್ಗುರುಗಳು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಗಳು ಹಾಗೂ ಪರಮಪೂಜ್ಯರುಗಳು ಜನವರಿ ೧೫ ರಿಂದ ಶ್ರೀಕ್ಷೇತ್ರ ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಪಾದಯಾತ್ರೆಯ ಮೂಲಕ ಕುರುಬರ ಜಾಗೃತಿ ಸಭೆಗಳನ್ನು ನಡೆಸಿದ್ದಾರೆ.
ಆದರೆ ಫೆ. ೭ರಂದು ಭಾನುವಾರದಂದು ಬೆಂಗಳೂರು, ತುಮಕೂರು ರಸ್ತೆ, ಮಾದಾವರದಲ್ಲಿರುವ ಇಂಟರ್‌ನ್ಯಾಷನಲ್ ವಸ್ತು ಪ್ರದರ್ಶನ ಮೈದಾನದಲ್ಲಿ ರಾಜ್ಯ ಸರ್ಕಾರ ಕುರುಬ ಜಾತಿಯನ್ನು ಎಸ್.ಟಿ. ಮೀಸಲಾತಿ ಪಟ್ಟಿಯೊಳಗೆ ವಿಸ್ತರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ಅಖಂಡ ಕರ್ನಾಟಕದ ಕುರುಬ ಸಮಾಜದ ಒಕ್ಕೊರಲ ಧ್ವನಿ “ಕುರುಬರ ಜಾಗೃತಿ ಸಮಾವೇಶ” ನಡೆಯಲಿದೆ. ಆದ್ದರಿಂದ ಸಮಾಜದ ಬಂದುಗಳು ನಾನು ಅವರೆನ್ನದೇ ಪ್ರತಿಯೋಬ್ಬರು ಫೆ. ೬ರಂದು ಜಿಲ್ಲೆಯಿಂದ ಹೊರಟು ಫೆ. ೭ರಂದು ಬೆಳಿಗ್ಗೆ ೭ ಗಂಟೆಗೆ ಈ ಸಮಾವೇಶದಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದು ಹಾಲುಮತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಬಸವರಾಜ ಆಕಳವಾಡಿ, ಜಿಲ್ಲಾಧ್ಯಕ್ಷ ಹನಮಂತ ಕೌದಿ, ಜಿಲ್ಲಾ ಉಪಾಧ್ಯಕ್ಷ ಕುಮಾರ ಮಜ್ಜಗಿ, ತಾಲೂಕ ಗೌರವ ಅಧ್ಯಕ್ಷ ದ್ಯಾಮಣ್ಣ ಕರಿಗಾರ, ತಿಳಿಸಿದ್ದಾರೆ.

Please follow and like us:
error