fbpx

ಕೃಷಿ ಸಚಿವ ಬಿ.ಸಿ.ಪಾಟೀಲ್ ಸಭೆ

koppal ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಬಿ.ಸಿ.ಪಾಟೀಲ್  ಇಂದು (ಏಪ್ರಿಲ್.09) ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತ ಕೈಗೊಂಡ ಕ್ರಮಗಳು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ ಮತ್ತು ಬೀಜ ಗೊಬ್ಬರಗಳ ಸರಬರಾಜು ಹಾಗೂ ಇತರೆ ಚಟುವಟಿಕೆಗಳ ಬಗ್ಗೆ ಸಭೆ ನಡೆಸಿದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೆಗೌಡ ಪಾಟೀಲ ಬಯ್ಯಾಪುರ, ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೆಸೂಗೂರು, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಡಿವೈಎಸ್‌ಪಿ ವೆಂಕಟಪ್ಪ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾ ಹಾಫ್‌ಕಾಂ ಅಧ್ಯಕ್ಷ ಯಕ್ಕಣ್ಣ ಯರಾಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

Please follow and like us:
error
error: Content is protected !!