ಕೇಂದ್ರ ಸರಕಾರದ ಸುಗ್ರೀವಾಜ್ಞೆಗೆ ವಿರೋಧ, ಸೆ. 25ಕ್ಕೆ ಬಂದ್‍ಗೆ ಕರೆ: ವೆಲ್ಫೇರ್ ಪಾರ್ಟಿ ಬೆಂಬಲ

ಕೊಪ್ಪಳ : ಕೇಂದ್ರ ಸರಕಾರವು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾನೂನುಗಳಿಗೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ಸುಗ್ರೀವಾಜ್ಞೆ ತರುವುದನ್ನು ವಿರೋಧಿಸಿ ಸೆಪ್ಟೆಂಬರ್ 25 ರಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಿದೆ.

ಕಾರ್ಪೋರೇಟ್,ಬಂಡವಾಳಶಾಹಿಗಳ ಹಿಡಿತಕ್ಕೆ ದೇಶವನ್ನು ಕೊಟ್ಟು ದೇಶದ ಕಾರ್ಮಿಕ ಹಾಗೂ ರೈತರನ್ನು ಗುಲಾಮರಾನ್ನಾಗಿ ಮಾಡುವ ಹುನ್ನಾರ ನಡೆದಿದೆ. ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ರೈತರು ಭೂಮಿ ಇಲ್ಲದೇ ಸರಕಾರ ಗೈರಾಣಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಸಾಗುವಳಿ ಮಾಡುವ ರೈತರಿಗೆ ಭೂಮಿ ಪಟ್ಟಾ ನೀಡದೇ ರೈತರನ್ನು ವಂಚಿಸಲಾಗುತ್ತಿದೆ. ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೆ ತಂದು ಸಣ್ಣಪುಟ್ಟ ರೈತ ಹಾಗೂ ಆದಿವಾಸಿಗಳನ್ನು ಬೀದಿಗೆ ತಳ್ಳುವ ವ್ಯವಸ್ಥಿತ ಸಂಚು ನಡೆಯುತ್ತಿದೆ.

ಕಾರ್ಮಿಕ ಕಾಯ್ದೆಯನ್ನು ಜಾರಿಗೆ ತಂದು ಕಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಿ, ಗುತ್ತೇದಾರ ಪದ್ಧತಿಯನ್ನು ಜಾರಿಗೆ ತರಲು ಹೊರಟಿದೆ. ಅಲ್ಲದೇ ವಿದ್ಯುತ್ ಕಾಯ್ದೆ ಜಾರಿಗೊಳಿಸುವ ಮೂಲಕ ಬಡವರ ಭಾಗ್ಯಜ್ಯೋತಿ ಉಚಿತ ವಿದ್ಯುತ್‍ನ್ನು ಮೊಟಕುಗೊಳಿಸುವ ಯತ್ನ ನಡೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಸೆಪ್ಟಂಬರ್ 25 ರಂದು ವಿವಿಧ ಸಂಘಟನೆಗಳ ಒಕ್ಕೂಟದಲ್ಲಿ ಭಾರತ ಬಂದ್‍ಗೆ ಕರೆ ಕೊಡಲಾಗಿದೆ.

ಪ್ರಯುಕ್ತ ರಾಜ್ಯಾದ್ಯಂತ ವೆಲ್ಫೇರ್ ಪಾರ್ಟಿ ಭಾರತ್ ಬಂದ್‍ಗೆ ಬೆಂಬಲ ನೀಡಲಾಗುವುದು. ಈ ಹೋರಾಟಕ್ಕೂ ಸರಕಾರ ಸ್ಪಂದಿಸದಿದ್ದಲ್ಲಿ ಅಸಹಕಾರ ಚಳವಳಿಯ ಮೂಲಕ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಆದಿಲ್ ಪಟೇಲ್ ತಿಳಿಸಿದರು.

Please follow and like us:
error