ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ : ಅರ್ಜಿ ಆಹ್ವಾನ


ಕೊಪ್ಪಳ,  : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2020-21ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ಗಾಗಿ 42 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.  ಅರ್ಜಿ ಸಲ್ಲಿಸಲು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.  ಅಭ್ಯರ್ಥಿಗಳು 2020ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ವರ್ಷದೊಳಗಿರಬೇಕು.  ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಅಥವಾ ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.  ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.1,000 ರಿಂದ ರೂ.1,200 ರವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಡಿಪ್ಲೋಮಾ ಕೋರ್ಸಗಾಗಿ ಕರ್ನಾಟಕದ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿAದ ಗದಗ ಮತ್ತು ಬೆಟಗೇರಿ (22 ಅಭ್ಯರ್ಥಿಗಳು), ತಮಿಳುನಾಡುನ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿAದ ಸೇಲಂ (15 ಅಭ್ಯರ್ಥಿಗಳು), ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಿAದ ವೆಂಕಟಗಿರಿ (03 ಅಭ್ಯರ್ಥಿಗಳು), ಕೇರಳದ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಕಣ್ಣೂರು (02 ಅಭ್ಯರ್ಥಿಗಳು) ಸೇರಿದಂತೆ ಒಟ್ಟು 42 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅರ್ಹ ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು.
ಆಸಕ್ತ ಅಭರ್ಥಿಗಳು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ – 582102 ವಿಳಾಸಕ್ಕೆ ಸೆಪ್ಟೆಂಬರ್ 10ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.  ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿಗಳಿಗಾಗಿ ಕಚೇರಿಯ ದೂರವಾಣಿ ಸಂ: 080-23561628, 23566082, 23568223 ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ (ದೂರವಾಣಿ – 08372-297221), ಅಥವಾ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕೊಪ್ಪಳ (ದೂರವಾಣಿ ಸಂಖ್ಯೆ:08539-230069) ಇವರುಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error